ನವದೆಹಲಿ: ನಮ್ಮನ್ನು ಅಗಲಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಂತಿಮ ನಮನ ಸಲ್ಲಿಸಿದರು.
ಸಂಸತ್ ಅಧಿವೇಶನ ಮುಗಿದ ನಂತರ ತಮ್ಮ ಲೋಕಸಭೆ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವರು; ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಶುಕ್ರವಾರ ಬೆಳ ಬೆಳಗ್ಗೆಯೇ ನವದೆಹಲಿಗೆ ವಾಪಸ್ಸಾದರು.
ವಿಮಾನ ನಿಲ್ದಾಣದಿಂದ ನೇರವಾಗಿ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಆಗಮಿಸಿದ ಸಚಿವರು; ಅಗಲಿದ ಮಾಜಿ ಪ್ರಧಾನಿಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು ಹಾಗೂ ದೇಶಕ್ಕೆ ಅವರು ನೀಡಿರುವ ಕೊಡುಗೆಯನ್ನು ಸ್ಮರಿಸಿದರು.
ದೇಶದ ಅಭಿವೃದ್ಧಿಗೆ ಮನಮೋಹನ್ ಸಿಂಗ್ ಅವರು ಮಹಾನ್ ಕೊಡುಗೆ ನೀಡಿದ್ದಾರೆ. ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ದೇಶವನ್ನು ಆರ್ಥಿಕ ಅಪಾಯದಿಂದ ಪಾರು ಮಾಡಿದ್ದರು. ಆರ್ಥಿಕ ಸಚಿವರಾಗಿ, ಪ್ರಧಾನಿಯಾಗಿ ಹಾಗೂ ಹಣಕಾಸು ತಜ್ಞರಾಗಿ ಅವರು ದೇಶಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ಕೇಂದ್ರ ಸಚಿವರು ಸ್ಮರಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಮನಮೋಹನ್ ಸಿಂಗ್ ಅವರ ಕುಟುಂಬ ಸದಸ್ಯರಿಗೆ ತಮ್ಮ ಸಂತಾಪಗಳನ್ನು ತಿಳಿಸಿದರು.
ಇದಕ್ಕೂ ಮುನ್ನ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಂಬನಿ
ದುರಿತ ಕಾಲದಲ್ಲಿ ದೇಶವನ್ನು ಮುನ್ನಡೆಸಿದ್ದ ಮೇಧಾವಿ ಎಂದ ಕೇಂದ್ರ ಸಚಿವರು; ದೂರದೃಷ್ಟಿ, ಸಂಯಮ ಮತ್ತು ತಮ್ಮ ಆರ್ಥಿಕ ಮೇದಸ್ಸಿನಿಂದ ರಾಷ್ಟ್ರವನ್ನು ದುರಿತ ಕಾಲದಲ್ಲಿ ಸಶಕ್ತವಾಗಿ ಮುನ್ನಡೆಸಿದ್ದ ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅಪಾರ. ಆರ್ಥಿಕ ಸುಧಾರಣೆಗಳ ಮೂಲಕ ಭಾರತಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟವರು ಅವರು. ಅವರ ಕೊಡುಗೆಗಳು ಚಿರಸ್ಮರಣೀಯ ಎಂದಿದ್ದಾರೆ.
ಹೊಸ ವರ್ಷದ ಸಂಭ್ರಮಾಚರಣೆ ಹಿನ್ನಲೆ: ಡಿ.31ರಂದು ತಡರಾತ್ರಿ 2.40ರವರೆಗೂ ಮೆಟ್ರೋ ಸಂಚಾರ
BIG NEWS: ಶಾಸಕ ಮುನಿರತ್ನ ಅತ್ಯಾಚಾರ ಯತ್ನ, ಏಡ್ಸ್ ಹರಡುವುದಾಗಿ ಟ್ರ್ಯಾಪ್ ಮಾಡಿದ್ದು ನಿಜ: SIT ಚಾರ್ಜ್ ಶೀಟ್