ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಚೆನ್ನೈಗೆ ತೆರಳಲಿದ್ದು, ಮಾರ್ಚ್ 21 ರಂದು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.
ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ಕುಮಾರಸ್ವಾಮಿ ಅವರು ಇಂದು ಚೆನ್ನೈಗೆ ಪ್ರಯಾಣ ಬೆಳಸಲಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಆರೋಗ್ಯ ತಪಾಸಣೆಗೆ ಒಳಗಾಗಲಿದ್ದಾರೆ.
ಮಾರ್ಚ್ 21 ರಂದು ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಬಳಿಕ ಮಾರ್ಚ್ 24 ರವರೆಗೆ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದು ಮಾ.25 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವರದಿಯಾಗಿದೆ.