ಸುಭಾಷಿತ :

Monday, February 24 , 2020 3:08 AM

‘ಅಭಿಮಾನಿಗಳ ಪಡೆ’ ನನ್ನ ಬೆನ್ನಿಗೆ ಇರುವಾಗ ನನ್ನ ಕೊಲ್ಲಲಾದೀತೆ.? : ‘ಬೆದರಿಕೆ ಪತ್ರ’ಕ್ಕೆ ಹೆಚ್ ಡಿ ಕುಮಾರಸ್ವಾಮಿ ಖಡಕ್ ಉತ್ತರ


Saturday, January 25th, 2020 3:46 pm

ಬೆಂಗಳೂರು : ಕಳೆದ ನಿನ್ನೆ ನಿಜಗುಣಾನಂದ ಸ್ವಾಮೀಜಿ ಸೇರಿದಂತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಚಿತ್ರ ನಟರು, ಕೆಲ ಸಂಘಟನೆಯ ಮುಖಂಡರನ್ನು ಕೊಲ್ಲುವುದಾಗಿ ಬೆದರಿಕೆ ಪತ್ರವನ್ನು ಕಳುಹಿಸಲಾಗಿತ್ತು. ಈ ಕುರಿತಂತೆ ಟ್ವಿಟರ್ ನಲ್ಲಿ ಖಡಕ್ ಎಚ್ಚರಿಕೆ ಕೊಟ್ಟಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿರುವಾಗ, ನನ್ನನ್ನು ಕೊಲ್ಲಲಾದೀತೆ ಎಂಬುದಾಗಿ ಟಾಂಗ್ ನೀಡಿದ್ದಾರೆ.

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ತಮ್ಮ ಮೊದಲ ಟ್ವಿಟ್ಟರ್ ನಲ್ಲಿಯೇ ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು ‘ಪಾಕಿಸ್ತಾನಿ’ ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ ಎಂದು ಕಿಡಿ ಕಾರಿದ್ದಾರೆ.

ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು‌. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೇ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂಬುದಾಗಿ ಎಚ್ಚರಿಸಿದ್ದಾರೆ.

“ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು” ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನದ ಪ್ರಾಯಶ್ಚಿತ್ತ ಪಡೆಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದಿದ್ದಾರೆ.

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ… ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂಬುದಾಗಿ ಕಿಡಿಕಾರಿದ್ದಾರೆ.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions