ಸುಭಾಷಿತ :

Wednesday, January 29 , 2020 9:39 PM

ರಾಜ್ಯದಲ್ಲಿ ‘ಸುಭದ್ರ ಸರ್ಕಾರ’ಕ್ಕೆ ಮುದ್ರೆ ಒತ್ತಿದ್ದ ಮತದಾರರಿಗೆ ‘ಮನದಾಳ ಅಭಿನಂದನೆ’ – ಹೆಚ್ ಡಿ ಕುಮಾರಸ್ವಾಮಿ


Monday, December 9th, 2019 2:24 pm

ಬೆಂಗಳೂರು : ಇದೊಂದು ಅಸಹ್ಯ ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು ಪವಿತ್ರ ಮತ್ತು ಸುಭದ್ರ ಸರ್ಕಾರಕ್ಕೆ ಮುದ್ದೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಅಂತೂ ಇಂತೂ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ. ಇಂತಹ ಫಲಿತಾಂಶದಲ್ಲಿ ಬಿಜೆಪಿ 12, ಕಾಂಗ್ರೆಸ್ 2 ಹಾಗೂ ಪಕ್ಷೇತರ 1 ಸ್ಥಾನವನ್ನು ಗಳಿಸಿಕೊಂಡಿದೆ. ಜೆಡಿಎಸ್ ಜೀರೋ ಆಗಿದ್ದರೂ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಬಿಜೆಪಿ ಬೆಂಬಲಿಸುವ ಪ್ರಕ್ರಿಯೆ ಮುಂದುವರೆದಿದೆ.

ಈ ಕುರಿತಂತೆ ಮೊದಲ ಟ್ವಿಟ್ ನಲ್ಲಿ ಕುರುಡು ಕಾಂಚಣ ಕುಣಿಯುತಲಿತ್ತು, ಕಾಲಿಗೆ ಬಿದ್ದವರ ತುಳಿಯುತ್ತಿತ್ತು ಎಂದು ಟ್ವಿಟ್ ಅಂತದಲ್ಲಿ ಮೂದಲಿಸಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಆ ಟ್ವಿಟ್ ಡಿಲಿಟ್ ಮಾಡಿ ಆನಂತ್ರ ಇದೊಂದು ಅಸಹ್ಯ ಸರ್ಕಾರ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು ಪವಿತ್ರ ಮತ್ತು ಸಭದ್ರ ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು ಎಂದು ಟ್ವಿಟ್ ಮಾಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions