ನವದೆಹಲಿ: ಕೇಂದ್ರ ಉಕ್ಕು ಮತ್ತು ಕೈಗಾರಿಕೆ ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ ನಿನ್ನೆ ಅಧಿಕಾರ ವಹಿಸಿಕೊಂಡಿದ್ದರು. ಈ ಬಳಿಕ ಇಂದು ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತ್ರ ಮೊದಲಿಗೆ ಕರ್ನಾಟಕದ ಈ ಕಡತಕ್ಕೆ ಸಹಿ ಹಾಕಿದ್ದಾರೆ. ಅದ್ಯಾವುದು ಅಂತ ಮುಂದೆ ಓದಿ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿರುವಂತ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಕೇಂದ್ರದ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು ಕರ್ನಾಟಕಕ್ಕೆ ಸಂಬಂಧಿಸಿದ ಕಡತ ಎನ್ನುವುದು ವಿಶೇಷ ಎಂದು ಹೇಳಿದ್ದಾರೆ.
ಆ ನಂತ್ರ ಮುಂದುವರೆದು ತಾನು ಕೇಂದ್ರ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತ್ರ, ದೇವದಾರಿ ಕಬ್ಬಿಣದ ಅದಿರು ಗಣಿಯ ಕಾರ್ಯಾಚರಣೆಗಾಗಿ ಕೆಐಒಸಿಎಲ್ ಲಿಮಿಟೆಡ್ ನ ಮೊದಲ ಕಡತಕ್ಕೆ ಸಹಿ ಹಾಕಲಾಯಿತು ಎಂದು ತಿಳಿಸಿದ್ದಾರೆ. ಈ ಮೂಲಕ ದೇವದಾರಿ ಕಬ್ಬಿಣದ ಅದಿರು ಗಣಿಯ ಕಾರ್ಯಾಚರಣೆಗೆ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಕೇಂದ್ರದ @SteelMinIndia ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು ಕರ್ನಾಟಕಕ್ಕೆ ಸಂಬಂಧಿಸಿದ ಕಡತ ಎನ್ನುವುದು ವಿಶೇಷ.
Signed the first file after assuming office as Union Minister of Steel. It is related to my home state Karnataka.
The first file of KIOCL Limited was… pic.twitter.com/woDnba7mgI
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 12, 2024
ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ ಅಂದ್ರೆ ತಪ್ಪಾ?: ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಿಡಿ
BREAKING: ಒಡಿಶಾದ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕಾರ | Mohan Charan Majhi takes oath