ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಕ್ಕೆ ಜಾತಿ, ಧರ್ಮ ಬಿಟ್ಟರೆ ಬೇರೆ ವಿಷಯ ಇಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು.
ಸುದ್ದಿಗಾರರ ಜೊತೆ ಮಾತನಾಡಿದ ಹೆಚ್ಡಿಕೆ ಬಿಜೆಪಿ ಪಕ್ಷಕ್ಕೆ ಜಾತಿ, ಧರ್ಮ ಬಿಟ್ಟರೆ ಬೇರೆ ವಿಷಯ ಇಲ್ಲ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಜನರ ಮನಸ್ಸನ್ನು ಕೆಡಿಸುತ್ತಿವೆ. ಆ ಎರಡೂ ಪಕ್ಷಗಳಿಗೆ ಅಭಿವೃದ್ಧಿ ಬೇಕಿಲ್ಲ ಎಂದರು.
ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆ ಕುರಿತು ಮಾತನಾಡಿದ ಕುಮಾರಸ್ವಾಮಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸೂಕ್ಷ್ಮ ವಿಚಾರ ಇಟ್ಟುಕೊಂಡು ಚುನಾವಣಾ ರಾಜಕೀಯ ಮಾಡುತ್ತಿವೆ. ಇದು ಸರಿಯಲ್ಲ ಎಂದರು.
‘ಕಾಂಗ್ರೆಸ್’ನ ದುರಾಡಳಿತ ಮತ್ತು ಅವರ ದೌರ್ಭಾಗ್ಯ ಜನರಿಗೆ ಬೇಡವಾಗಿದೆ – ಸಿಎಂ ಬಸವರಾಜ ಬೊಮ್ಮಾಯಿ
ಬಾಲಕಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಬೆಳಗಾವಿಯಲ್ಲಿ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ