ಬೆಂಗಳೂರು :  ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಕುಮಾರಸ್ವಾಮಿ  ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಕನ್ನಡಿಗರ ಹಕ್ಕುಗಳಿಗೆ ಮರಣಶಾಸನ ಬರೆಯುವುದಾ? ಕನ್ನಡಿಗರಿಗೆ ಬೇಕಿದೆ ಉತ್ತರ, ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ? ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಬಿಜೆಪಿ ಸರ್ಕಾರದ ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎನ್ನುವುದಕ್ಕೆ ಇಲ್ಲಿದೆ ಹೊಸ ಸಾಕ್ಷಿ ಎಂದು ಟ್ವೀಟ್ ಮಾಡಿದ್ದಾರೆ

ಕೋಟಿ ಕಂಠ ಗಾಯನ ಎಂದರೆ ಕೋಟಿಗೂ ಹೆಚ್ಚು ಕನ್ನಡ ಕಂಠಗಳಿಗೆ ಜೀವ ತುಂಬುವುದು, ಅನ್ನದ ದಾರಿ ತೋರಿಸುವುದು, ಬದುಕಿನ ಖಾತರಿ ಕೊಡುವುದು. ಕೇವಲ ನಾಲಿಗೆ ಮೇಲೆ ಕನ್ನಡ ಎಂದು ಹೇಳಿ, ಮನದಾಳದಲ್ಲಿ ಅದೇ ಕನ್ನಡದ ಮೇಲೆ ವಿಷ ಕಕ್ಕುವುದಲ್ಲ. ಅದನ್ನು ಕನ್ನಡಿಗರು ಎಂದಿಗೂ ಸಹಿಸುವುದೂ ಅಲ್ಲ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

BREAKING NEWS: ಓಲಾ ,ಉಬರ್‌ ಜೊತೆಗಿನ ಸಭೆ ಅಂತ್ಯ; 2 ಕಿ.ಮೀ.ಗೆ ಆಟೋ ದರ 100 ರೂ. ನಿಗದಿ ಪಡಿಸಲು ಮನವಿ

HEALTH TIPS: ಬೆಳ್ಳುಳ್ಳಿಯ ನಾಲ್ಕು ವಿಧಗಳಲ್ಲಿ ಅಡುಗೆಗೆ ಯಾವುದು ಉತ್ತಮ ? ಇಲ್ಲಿದೆ ಅಗತ್ಯ ಮಾಹಿತಿ | Garlic

Share.
Exit mobile version