ಕಲಬುರ್ಗಿ : ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ಬಂಧನದ ಕುರಿತಾಗಿ ಕಲ್ಬುರ್ಗಿಯಲ್ಲಿ ಎಐಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿ, ಇಂತಹ ಪ್ರಕರಣದಲ್ಲಿ ಯಾರನ್ನು ಬಿಡುಗಡೆ ಮಾಡುವ ಪ್ರಶ್ನೆಯೇ ಇಲ್ಲ. ಕಾನೂನು ಕಠಿಣವಿದೆ ಎಂದು ತಿಳಿಸಿದರು.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಇಂತಹ ಕೆಲಸbಮಾಡುತ್ತಾರೆ ಅವರಿಗೆ ಬುದ್ಧಿ ಬರಬೇಕು.ಅನ್ಯಾಯಕ್ಕೆ ಒಳಗಾದ ಕುಟುಂಬಗಳಿಗೆ ನ್ಯಾಯ ಸಿಗಬೇಕು.ಕಾನೂನಿನಿಂದ ಯಾರಿಗೂ ಬಿಡುಗಡೆ ಇಲ್ಲ ಕಾನೂನು ಕಠಿಣ ಇದೆ ಎಂದು ಅವರು ತಿಳಿಸಿದರು.
ಇದು ಹತ್ತಾರು ವರ್ಷಗಳಿಂದ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಈ ಪ್ರಕರಣವನ್ನು ಯಾರು ರಾಜಕೀಯವಾಗಿ ಬಳಸಿಕೊಳ್ಳಬಾರದು. ಅದೇ ರೀತಿಯಾಗಿ ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಪ್ರಶ್ನಿಸಿದಾಗ ಉತ್ತರಿಸಿದ ಅವರು, ಪ್ರಜ್ವಲ್ ಬಗ್ಗೆ ನಾನು ಮಾತನಾಡಲಾರೆ ಎಂದು ಕಲಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.