ಕೊಪ್ಪಳ : ಸರ್ಕಾರದ ಖಜಾನೆ ತುಂಬಲು ರಾಜ್ಯದ ಜನತೆ ಸರ್ಕಾರಕ್ಕೆ ಸಹಕಾರ ನೀಡಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ನಾಡಿನ ಸಂಪತ್ತನ್ನು ವಾಮ ಮಾರ್ಗದಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಪ್ರತಿನಿತ್ಯವು ಗ್ಯಾರಂಟಿಗಳ ಭಜನೆ ಮಾಡುತ್ತಿದೆ. ಬೇರೆ ಏನನ್ನು ಕಾಂಗ್ರೆಸ್ ಸರ್ಕಾರದಿಂದ ನಿರೀಕ್ಷಿಸಲು ಸಾಧ್ಯವಿಲ್ಲ. ಕೆಕೆಆರ್‌ಡಿಬಿಗೆ 5,000 ಕೋಟಿ ಕೊಡುತ್ತೇವೆ ಅಂತ ಹೇಳಿದ್ರು. ಇದುವರೆಗೂ ರಾಜ್ಯ ಸರ್ಕಾರ ನಯಾ ಪೈಸೆ ಹಣ ಬಿಡುಗಡೆ ಮಾಡಿಲ್ಲ.
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ನಾಡಿನ ಜನ ಸರ್ಕಾರದ ಖಜಾನೆ ತುಂಬಿಸಲು ಸಹಕಾರ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಹೆಚ್ಚಿನ ತೆರಿಗೆ ಹಾಕಿದ್ದಾರೆ. ಹಾಗಾದರೆ ಜನರ ತೆರಿಗೆ ಹಣ ಎಲ್ಲಿಗೆ ಹೋಗುತ್ತಿದೆ?ನಾಡಿನ ಸಂಪತ್ತು ವಾಮ ಮಾರ್ಗದಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇನ್ನು ಮೇಕೆದಾಟು ಪಾದಯಾತ್ರೆಯ ವೇಳೆ ಕನ್ನಡ ಚಿತ್ರರಂಗ ಬೆಂಬಲ ನೀಡಿಲ್ಲವೆಂದು ಡಿಸೆಂಬ ಡಿಕೆ ಶಿವಕುಮಾರ್ ನಿನ್ನೆ ನಟ್ಟು ಬೋಲ್ಟು ಹೇಗೆ ಸರಿ ಮಾಡಬೇಕು ಎಂದು ಗೊತ್ತಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ, ನಟ್ಟು ಬೋಲ್ಡ್ ಸರಿ ಮಾಡಲು ಆಯಾ ತಜ್ಞರು ಇದ್ದಾರೆ. ನಿಮ್ಮ ಕೆಲಸ ಏನು ಮಾಡಬೇಕು ಅದನ್ನು ಮಾಡಿ ಚಿತ್ರರಂಗದವರು ಬೆಂಬಲ ಕೊಡುತ್ತಾರೋ ಇಲ್ವೋ ಪ್ರಶ್ನೆ ಬರಲ್ಲ. ರಾಜ್ಯದ ಜನ ನಿಮಗೆ ಬೆಂಬಲ ಕೊಟ್ಟಿದ್ದಾರೆ ತಾನೇ? ಮೊದಲು ನಿಮ್ಮ ಕೆಲಸ ಮಾಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯದ ಜನರು ಇವರಿಗೆ 136 ಸ್ಥಾನ ನೀಡಿದ್ದಾರೆ. ನಟ್ಟು ಬೋಲ್ಟ್ ಸರಿ ಮಾಡಲು ಇವರಿಗೆ ಅಧಿಕಾರ ಕೊಟ್ಟಿದ್ದಾರಾ? ಆ ಕೆಲಸ ಮಾಡಲು ಬೇರೆಯವರು ಇದ್ದಾರೆ ರಾಜ್ಯದಲ್ಲಿ ಕೇವಲ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇವರ ಬಗ್ಗೆ ಅವರು ಅವರ ಬಗ್ಗೆ ಇವರು ಮಾತನಾಡುತ್ತಿದ್ದಾರೆ. ಆದರೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಈ ಸರ್ಕಾರಕ್ಕೆ ಚಿಂತನೆ ಇಲ್ಲ.ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುತ್ತಾರೆ ಎಂದು ಜಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ಯಾರು ಏನೆಲ್ಲಾ ಆಗ್ತಾರೆ ಅಂತ ಕಾಲವೇ ನಿರ್ಧಾರ ಮಾಡುತ್ತದೆ ಎಂದರು.