ಮಂಡ್ಯ : ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ 66ನೇ ಜನ್ಮದಿನದ ಅಂಗವಾಗಿ ಮದ್ದೂರು ನಗರದ ವಿವಿಧ ದೇವಾಲಯಗಳ ಅರ್ಚಕರುಗಳು ಮಂಗಳವಾರ ಮಂತ್ರಾಕ್ಷತೆ ಮತ್ತು ಫಲ ತಾಂಬೂಲ ನೀಡಿ ಆಶೀರ್ವದಿಸಿದರು.
ಹುಟ್ಟು ಹಬ್ಬದ ಅಂಗವಾಗಿ ಬೆಂಗಳೂರಿನಿಂದ ಮೈಸೂರಿನ ಶ್ರೀ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕುಮಾರಸ್ವಾಮಿ ಅವರು ಮದ್ದೂರು ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಂತೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಸಾವಿರಾರು ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಜೈಕಾರ ಹಾಕಿ ಬೃಹತ್ ಹೂವಿನ ಹಾರಗಳನ್ನು ಹಾಕಿ ಅದ್ದೂರಿಯಾಗಿ ಸ್ವಾಗತಿಸಿದರು.
ಬಳಿಕ, ಸಚಿವ ಕುಮಾರಸ್ವಾಮಿ ಅವರಿಗೆ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇಗುಲದ ಪ್ರಧಾನ ಅರ್ಚಕ ಪ್ರದೀಪ ಆಚಾರ್ಯ, ಸಹ ಅರ್ಚಕ ಸುರೇಶ ಆಚಾರ್ಯ, ಶ್ರೀ ಉಗ್ರ ನರಸಿಂಹ ಸ್ವಾಮಿ ದೇಗುಲದ ಅರ್ಚಕ ಪ್ರಶಾಂತ್, ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿ ದೇಗುಲದ ಅರ್ಚಕ ರಾಘವೇಂದ್ರ ಅವರುಗಳ ತಂಡ ಕುಮಾರಸ್ವಾಮಿ ಅವರಿಗೆ ಶೇಷ ವಸ್ತ್ರ, ತೀರ್ಥ ಪ್ರಸಾದ ನೀಡಿ ಆಶೀರ್ವದಿಸಿದರು.
ಸಚಿವ ಹೆಚ್.ಡಿ. ಕುಮಾರಸ್ವಾಮಿ ಜನ್ಮ ದಿನಾಂಕವು ಯೋಗದ ಫಲವಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದು ಅವರು ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿದರು. ಇದೇ ವೇಳೆ ಮನ್ಮುಲ್ ಮಾಜಿ ನಿರ್ದೇಶಕಿ ರೂಪ ಕುಮಾರಸ್ವಾಮಿ ಅವರಿಗೆ ಬೆಲ್ಲದಾರತಿ ಬೆಳಗಿ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ನಂತರ ಜೆಡಿಎಸ್ ಕಾರ್ಯಕರ್ತರಿಗೆ ಅಭಯ ನೀಡಿದ ಕುಮಾರಸ್ವಾಮಿ ಮುಂದಿನ ದಿನಗಳಲ್ಲಿ ನಮ್ಮ ಪಕ್ಷಕ್ಕೆ ಒಳ್ಳೆಯ ಕಾಲ ಬರುತ್ತದೆ. ಅಲ್ಲಿಯವರೆಗೆ ಕಾರ್ಯಕರ್ತರು ಎದೆಗುಂದಬಾರದು. ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಒಂದು ಸಲಹೆ ನೀಡಿದರು.
ಜೆಡಿಎಸ್ ಕಾರ್ಯಕರ್ತರು ತಂದಿದ್ದ ಭಾರಿ ಗಾತ್ರದ ಕೇಕ್ ಕತ್ತರಿಸಿ ಹೆಚ್.ಡಿ.ಕುಮಾರಸ್ವಾಮಿ ಹುಟ್ಟು ಹಬ್ಬ ಆಚರಿಸಿಕೊಂಡರು. ಇದೇ ವೇಳೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು ಹಾಗೂ ಮಾಜಿ ಶಾಸಕ ಸುರೇಶ್ ಗೌಡ ಅವರುಗಳು ಕೇಕ್ ತಿನ್ನಿಸುವ ಮೂಲಕ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ಇದೇ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ. ಜೆಡಿಎಸ್ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ದಿವ್ಯ ರಾಮಚಂದ್ರಶೆಟ್ಟಿ, ಸಮಾಜ ಸೇವಕ ಅಪ್ಪುಪಿ.ಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ರವಿ ಚನ್ನಚಂದ್ರ, ನಗರಸಭಾ ಮಾಜಿ ಸದಸ್ಯರಾದ ಪ್ರವೀಣ್, ಮನೋಜ್ ಸೇರಿದಂತೆ ನೂರಾರು ಮಂದಿ ಜೆಡಿಎಸ್, ಬಿಜೆಪಿ ಮುಖಂಡರು ಕಾರ್ಯಕರ್ತರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಐಪಿಎಲ್ 2026 ಹರಾಜು: ಹೀಗಿದೆ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ | IPL 2026 Auction








