ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಗಳಿಗೆ ಬಿಜೆಪಿಯಿಂದ ಟಿಕೆಟ್ ಘೋಷಣೆ ಮಾಡಲಾಗಿತ್ತು. ಆದರೇ ಚನ್ನಪಟ್ಟಣಕ್ಕೆ ಘೋಷಣೆ ಮಾಡಿರಲಿಲ್ಲ. ಇಂದು ಮಧ್ಯಾಹ್ನ 3.30ಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಜಂಟಿ ಸುದ್ದಿಗೋಷ್ಠಿಯಲ್ಲಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಿದ್ದಾರೆ.
ಈ ಕುರಿತಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, NDA ವರಿಷ್ಠ ನಾಯಕರಾದ ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ H.D.ಕುಮಾರಸ್ವಾಮಿ ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ BS ಯಡಿಯೂರಪ್ಪ ಅವರು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಮೈತ್ರಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಲಿದ್ದಾರೆ ಎಂದಿದೆ.
ಇಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ನಡೆಸಲಿದ್ದಾರೆ. ಉಭಯ ವರಿಷ್ಠ ನಾಯಕರು ಅಲ್ಲಿಯೇ ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಮಾತನಾಡಿ, ಅಭ್ಯರ್ಥಿಯನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂಬುದಾಗಿ ತಿಳಿಸಿದೆ.
BIG UPDATE: ಬೆಂಗಳೂರಲ್ಲಿ ವಾಲಿದ ಮತ್ತೊಂದು ನಿರ್ಮಾಣ ಹಂತದ ಕಟ್ಟಡ: ತೆರವಿಗೆ ಬಿಬಿಎಂಪಿ ಸೂಚನೆ
BREAKING: ಶಿಗ್ಗಾವಿ ವಿಧಾನ ಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ