ಮೈಸೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ ಕುರಿತು ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಸಂಘದ ಬಗ್ಗೆ ಮಾತನಾಡಿ ಬಾಯಿ ಚಪಲ ತೀರಿಸಿಕೊಳ್ಳುವ ಬದಲು 40 ವರ್ಷದಿಂದ ಕಲ್ಯಾಣ ಕರ್ನಾಟಕಕ್ಕೆ ಮಾಡಿದ್ದೇವೆ ಎಂಬುದನ್ನು ಮೊದಲು ಹೇಳಲಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಚಾಟಿ ಬೀಸಿದರು.
ಮೈಸೂರಿನಲ್ಲಿ ಶನಿವಾರ ದಿಶಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಸಚಿವರು ಮಾತನಾಡಿದರು.
ಆರ್ ಎಸ್ ಎಸ್ ಅನ್ನು ಬಂದ್ ಮಾಡುವುದಿರಲಿ, ಈಗ ಕಾಂಗ್ರೆಸ್ ಪಕ್ಷವೇ ಎಲ್ಲಾ ಕಡೆ ಬಂದ್ ಆಗುತ್ತಿದೆ. ಜನರೇ ಬಹುತೇಕ ಕಡೆ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡುತ್ತಿದ್ದಾರೆ. ಮೊದಲು ನಿಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಿ. ಪ್ರಿಯಾಂಕ್ ಖರ್ಗೆ ಅವರು ಬಾಯಿ ಚಪಲಕ್ಕೆ ಮೂಲ ವಿಚಾರಗಳನ್ನ ಮರೆ ಮಾಚಲು ಈ ರೀತಿ ಹೇಳಿಕೆ ಕೊಡ್ತಿದ್ದಾರೆ ಅಷ್ಟೇ ಎಂದು ಕೇಂದ್ರ ಸಚಿವರುಕ್ ವಾಗ್ದಾಳಿ ನಡೆಸಿದರು.
ಕುಣಿಗಲ್ ಮಾತ್ರವಲ್ಲ ತುಮಕೂರಿನ ಎಲ್ಲಾ ತಾಲ್ಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ: ಡಿಕೆಶಿ
ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ: ಹೆಚ್.ಡಿ ಕುಮಾರಸ್ವಾಮಿ ಕಿಡಿ