ರಾಮನಗರ : ಕುಮಾರಸ್ವಾಮಿ ಮತ್ತೆ ಸಿಎಂ ಆಗಲಿ ಎಂದು ಜೆಡಿಎಸ್ ಕೂಗು ಕೇಳಿಬರುತ್ತಿದೆ. ಇದರ ನಡುವೆ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗಬೇಕು ಎಂದು ಅಭಿಮಾನಿಗಳು ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ.
ಕನಕಪುರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡ ಅಭಿಮಾನಿಗಳು ಕುಮಾರಸ್ವಾಮಿ ಭಾವಚಿತ್ರ ನೆಚ್ಚಿನ ನಾಯಕನಿಗೆ ಜೈಕಾರ ಹಾಕಿದ್ದಾರೆ. ಕುಮಾರಸ್ವಾಮಿ ಮತ್ತೆ ಸಿಎಂ ಆಗಲೆಂದು ಅಭಿಮಾನಿಗಳು ಹರಕೆ ಹೊತ್ತಿದ್ದರು ಎನ್ನಲಾಗಿದ್ದು, ಇಂದು ಶಬರಿಮಲೆ ತಲುಪಿದ್ದಾರೆ .
ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಹೆಚ್.ಡಿ.ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ರಾಜ್ಯ ಜೆಡಿಎಸ್ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ., ಜೆಡಿಎಸ್ ಪಕ್ಷವು ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು, ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಿದರೆ ಮುಸ್ಲಿಂ, ದಲಿತ, ಮಹಿಳೆ, ಒಬಿಸಿ, ಲಿಂಗಾಯತ ಅಥವಾ ಇತರ ಸಮುದಾಯದ ನಾಯಕರಿಗೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು.
ಕುಮಾರಸ್ವಾಮಿ ಅವರು ಮುಸ್ಲಿಂ ಅಥವಾ ದಲಿತ ಸಿಎಂ ಆಗಬೇಕು ಎಂಬ ಆಸೆ ವ್ಯಕ್ತಪಡಿಸಿದ್ದಾರೆ, ಅದರಲ್ಲಿ ತಪ್ಪೇನಿದೆ? ಇಲ್ಲಿ ಪಕ್ಷದ ಅಧ್ಯಕ್ಷನಾಗಿ, ಕುಮಾರಸ್ವಾಮಿ ಅವರೇ ಸಿಎಂ ಆಗುತ್ತಾರೆ ಎಂದು ನಾನು ಹೇಳುತ್ತೇನೆ. ಆದರೆ, 2024 ರ ಲೋಕಸಭಾ ಚುನಾವಣೆಯಲ್ಲಿ ಅವರು ರಾಷ್ಟ್ರ ರಾಜಕಾರಣವನ್ನು ಪ್ರವೇಶಿಸುವ ಸಾಧ್ಯತೆಯಿದೆ ಆಗ ಇತರರು ಇಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಇಬ್ರಾಹಿಂ ಹೇಳಿದರು.
ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಅಳವಡಿಸಬೇಕು – ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯ | Bhagavad Gita