ಮಂಡ್ಯ : ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆಗಿರುವ ಹೆಚ್ಡಿ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಮಾತನಾಡಿದ ಅವರು, ಜೆಡಿಎಸ್ ನನ್ನು ನೆಲಕಚ್ಚಿಸಲಿಕೆ ಕಾಂಗ್ರೆಸ್ ಅವರಿಗೆ ಆಗುವುದಿಲ್ಲ. ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿರುವುದರಿಂದ ಸಹಜವಾಗಿ ಕಾಂಗ್ರೆಸ್ಗೆ ಆತಂಕ ಶುರುವಾಗಿ ನನ್ನ ವಿರುದ್ಧ ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
BREAKING : ಜಪಾನ್ ನಲ್ಲಿ ಬೆಳ್ಳಂಬೆಳಗ್ಗೆ ಮತ್ತೆ 6.0 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ ಇಲ್ಲ
ಮಂಡ್ಯದ ಗುತ್ತಲು ಬಳಿಯ ಆರ್ಕೇಶ್ವರ ಸ್ವಾಮಿ ದೇವಸ್ಥಾನಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಅರ್ಕೆಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಕುಮಾರಸ್ವಾಮಿ ನಾಮಪತ್ರವನ್ನು ಇಟ್ಟು ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿವಾರ್ಯವಾಗಿ ನಾನು ಸ್ಪರ್ಧೆ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಮೈತ್ರಿ ಸಂಬಂಧ ಬೆಳೆದ ನಂತರ ಆತಂಕಗೊಂಡಿದ್ದಾರೆ.ಮೈತ್ರಿಯಿಂದ ಕಾಂಗ್ರೆಸ್ ನಾಯಕರಿಗೆ ಆತಂಕ ಶುರುವಾಗಿದೆ. ವೈಯಕ್ತಿಕವಾಗಿ ನನ್ನ ಮೇಲೆ ಟೀಕೆಯನ್ನು ಮಾಡಿದ್ದಾರೆ ಅವರಿಂದ ನಾನು ಸರ್ಟಿಫಿಕೇಟ್ ಪಡೆಯಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು.
BIG UPDATE : ಕೊಳವೆಬಾವಿಯಲ್ಲಿ ಬಿದ್ದ 2 ವರ್ಷದ ಬಾಲಕನ ರಕ್ಷಣೆಗೆ ಮುಂದುವರೆದ ಕಾರ್ಯಾಚರಣೆ : ಕೇವಲ ಅರ್ಧ ಅಡಿ ಬಾಕಿ!
ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಹೊಂದಾಣಿಕೆಯ ಎನ್ ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ. ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಹಿರಿಯರಾಗಿರುವಂತಹ ಯಡಿಯೂರಪ್ಪ ಗೋವಾ ಮುಖ್ಯಮಂತ್ರಿಗಳಾಗಿರುವಂತಹ ಪ್ರಮೋದ್ ಸಾವಂತ್ ನಮ್ಮ ಜಿಲ್ಲೆಯ ಎರಡು ಪಕ್ಷಗಳ ಎಲ್ಲಾ ಮುಖಂಡರುಗಳು ಸೇರಿ ನಾಮಪತ್ರ ಸಲ್ಲಿಸಲಾಗುತ್ತದೆ.
ರಾಷ್ಟ್ರ ರಾಜಕಾರಣಕ್ಕಿಂತ ಹೆಚ್ಚಾಗಿ ಇವತ್ತು ಅನಿವಾರ್ಯವಾಗಿ ಸ್ಪರ್ಧೆ ಮಾಡುವ ಪರಿಸ್ಥಿತಿ ಇದೆ, ಜಿಲ್ಲೆ ಮತ್ತು ದೇಶ ಮತ್ತು ರಾಜ್ಯಕ್ಕೆ ಉತ್ತಮವಾದಂತಹ ರೈತ ಪರವಾದಂತಹ ಕಾರ್ಯಕ್ರಮಗಳನ್ನು ತರಲಿಕ್ಕೆ ಅನುಕೂಲವಾಗುವಂತಹ ಹಿನ್ನೆಲೆಯಲ್ಲಿ ಈ ತೀರ್ಮಾನ ಮಾಡಿದ್ದೇನೆ ಎಂದು ಅವರು ತಿಳಿಸಿದರು.