ಹರಿದ್ವಾರ (ಉತ್ತರಾಖಂಡ) : ಮಧುರೈ ಅಧೀನಂನ ಪ್ರಧಾನ ಅರ್ಚಕ ಶ್ರೀ ಹರಿಹರ ದೇಶಿಕ ಸ್ವಾಮಿಗಳು ಅವರು ನೂತನ ಸಂಸತ್ ಭವನದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ‘ಸೆಂಗೊಲ್’ ಅನ್ನು ಅರ್ಪಿಸಲಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ ಅವರು 2024ರಲ್ಲಿ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಹೇಳಿದ್ದಾರೆ.
ಮೇ 28 ರಂದು ಮಧುರೈ ಅಧೀನಂನ 293 ನೇ ಪ್ರಧಾನ ಅರ್ಚಕರಿಂದ ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನೆಯ ಸಂದರ್ಭದಲ್ಲಿ ‘ಸೆಂಗೊಲ್’ ರಾಜದಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡುತ್ತಾರೆ.
ಶ್ರೀ ಹರಿಹರ ದೇಶಿಕ ಸ್ವಾಮಿಗಳು ಮಾತನಾಡಿ, ಪ್ರಧಾನಿ ಮೋದಿಯವರು ಜಾಗತಿಕವಾಗಿ ಮೆಚ್ಚುಗೆ ಗಳಿಸಿದ್ದಾರೆ ಮತ್ತು ದೇಶದ ಪ್ರತಿಯೊಬ್ಬರೂ ಅವರ ಬಗ್ಗೆ ಹೆಮ್ಮೆಪಡುತ್ತಾರೆ. ಪ್ರಧಾನಿ ಮೋದಿ ಜಾಗತಿಕ ಮೆಚ್ಚುಗೆಯನ್ನು ಪಡೆದ ನಾಯಕ. ಅವರು ಜನರಿಗೆ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. 2024 ರಲ್ಲಿ ಅವರು ಮತ್ತೆ ಪ್ರಧಾನಿಯಾಗಬೇಕು ಮತ್ತು ಜನರಿಗೆ ಮಾರ್ಗದರ್ಶನ ನೀಡಬೇಕು. ವಿಶ್ವ ನಾಯಕರು ನಮ್ಮ ಪ್ರಧಾನಿ ಮೋದಿಯನ್ನು ಪ್ರಶಂಸಿಸುತ್ತಿರುವುದು ನಮಗೆಲ್ಲರಿಗೂ ಹೆಮ್ಮೆ ತಂದಿದೆ. ನಾನು ಪ್ರಧಾನಿ ಮೋದಿಯವರನ್ನು ಭೇಟಿ ಮಾಡುತ್ತೇನೆ ಮತ್ತು ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನೆಯಂದು ಅವರಿಗೆ ‘ಸೆಂಗೊಲ್’ ಅನ್ನು ನೀಡುತ್ತೇನೆ ಎಂದು ಅವರು ಹೇಳಿದರು.
ಬ್ರಿಟಿಷರಿಂದ ಭಾರತಕ್ಕೆ ಅಧಿಕಾರದ ಹಸ್ತಾಂತರದ ಸಂಕೇತವನ್ನು ಪ್ರತಿನಿಧಿಸಲು ಐತಿಹಾಸಿಕ ರಾಜದಂಡ ‘ಸೆಂಗೊಲ್’ ಅನ್ನು ಆಗಸ್ಟ್ 14, 1947 ರಂದು ಪಂಡಿತ್ ಜವಾಹರಲಾಲ್ ನೆಹರು ಸ್ವೀಕರಿಸಿದರು. ಇದೇ ಮೇ 28 ರಂದು ಮಧುರೈ ಅಧೀನಂನ ಪ್ರಧಾನ ಅರ್ಚಕರು ಪ್ರಧಾನಿ ಮೋದಿಗೆ ಹಸ್ತಾಂತರಿಸಲಿದ್ದಾರೆ.
ನಿಷೇಧಿತ PLFIಗೆ ಸೇರಿದ ಇಬ್ಬರು ನಕ್ಸಲೀಯರು ಅರೆಸ್ಟ್; ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ
ನಿಷೇಧಿತ PLFIಗೆ ಸೇರಿದ ಇಬ್ಬರು ನಕ್ಸಲೀಯರು ಅರೆಸ್ಟ್; ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ