ಬೆಂಗಳೂರು: ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾ ವಿವಾದ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಈ ವಿಚಾರವಾಗಿ ಫಿಲ್ಮಂ ಛೇಂಬರ್ ನಲ್ಲಿ ಸಭೆ ನಡೆದಿತ್ತು.
BIGG NEWS: ರಾಜ್ಯದ ಎಲ್ಲ ಅರೇಬಿಕ್ ಶಾಲೆಗಳ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು; ಬಿ.ಸಿ ನಾಗೇಶ್
ಈಸಭೆಯಲ್ಲಿ ಕರಗದ ಬಗ್ಗೆ ಡೈಲಾಗ್ ಗೆ ಬೀಪ್ ಹಾಕಲು ಚಿತ್ರತಂಡ ನಿರ್ಧಾರ ಮಾಡಿದೆ. ವಿವಾದಿತ ಸಂಭಾಷಣೆಗೆ ಬೀಪ್ ಹಾಕಲು ಚಿತ್ರತಂಡ ನಿರ್ಧರಿಸಿದೆ.
ಹೆಡ್ ಬುಷ್ ಸಿನಿಮಾ ವಿವಾದಕ್ಕೆ ರಾಜಕೀಯ ತಿರುವು
ಇನ್ನು ಹೆಡ್ ಬುಷ್ ಸಿನಿಮಾದ ವಿವಾದ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಹೌದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ವೀರಗಾಸೆ ಕುರಿತಾಗಿ ಟ್ವಿಟ್ ಮಾಡುತ್ತಿದ್ದಂತೆಯೇ ಅನೇಕರು ಅವರ ಮೇಲೆ ಮುಗಿ ಬಿದ್ದಿದ್ದು, ಜಾನಪದ ಕಲಾವಿದರಿಗೂ ಮಾಸಾಶನ ನೀಡುವಂತೆ ಆಗ್ರಹಿಸಿದ್ದಾರೆ.ಬರೀ ಒಂದು ಸಮುದಾಯಕ್ಕೆ ಮಾತ್ರ ಮಾಸಾಶನ ಕೊಟ್ಟಿದ್ದೀರಿ. ವೀರಗಾಸೆ, ಕಂಸಾಳೆ ಹೀಗೆ ಎಲ್ಲ ಜಾನಪದ ಪ್ರಕಾರದ ಕಲಾವಿದರಿಗೂ ಕೊಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹ ವ್ಯಕ್ತವಾಗಿದೆ.