ಮಂಡ್ಯ : ಆರೋಪಿಯೊಬ್ಬನಿಂದ 5 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಹೆಡ್ ಕಾನ್ಸ್ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಗುರುವಾರ ಮಳವಳ್ಳಿ ಪಟ್ಟಣದಲ್ಲಿ ಜರುಗಿದೆ.
ಮಳವಳ್ಳಿ ಗ್ರಾಮಾಂತರ ಪೋಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿಯಾಗಿದ್ದಾರೆ.
ಮಳವಳ್ಳಿ ತಾಲೂಕಿನ ಅಂಚೆದೊಡ್ಡಿ ಗ್ರಾಮದ ನವೀನ್ ಎಂಬುವರು ಇತ್ತಿಚೆಗೆ ನಡೆದಿದ್ದ ಗಲಾಟೆಯೊಂದರಲ್ಲಿ ಅವರನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ನವೀನ್ ಹೊರ ಬಂದಿದ್ದರು. ಇವರ ಮೇಲೆ ಪೋಲೀಸ್ ಅಧಿಕಾರಿಗಳು ನವೀನ್ ಮೇಲೆ ರೌಡಿ ಶೀಟರ್ ತೆರೆಯಬೇಕೆಂದು ನಿರ್ಧರಿಸಲಾಗಿತ್ತು.
ಹೀಗಾಗಿ ನಿನ್ನ ವಿರುದ್ದ ರೌಡಿ ಶೀಟರ್ ಅನ್ನು ತೆರೆಯಬಾರದು ಎಂದರೆ 5 ಸಾವಿರ ಲಂಚ ನೀಡಬೇಕೆಂದು ಹೆಡ್ ಕಾನ್ಸ್ಟೇಬಲ್ ವೆಂಕಟೇಶ್ ನವೀನ್ ಬಳಿ ಬೇಡಿಕೆ ಇಟ್ಟಿದ್ದರು.
ಈ ವಿಚಾರವಾಗಿ ಮಂಡ್ಯ ಲೋಕಾಯುಕ್ತಕ್ಕೆ ನವೀನ್ ದೂರು ಸಲ್ಲಿಸಿದ್ದರು. ಗುರುವಾರ ಲೋಕಾಯುಕ್ತ ಅಧಿಕಾರಿಗಳ ಮಾರ್ಗದರ್ಶನ ದಂತೆ ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಆರೋಪಿ ನವೀನ್ ಅವರಿಂದ ಹೆಡ್ ಕಾನ್ಸ್ಟೇಬಲ್ ವೆಂಕಟೇಶ್ 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಡಿವೖಎಸ್ಪಿ ಸುನೀಲ್ ಕುಮಾರ್, ಇನ್ಸ್ ಪೆಕ್ಟರ್ ಗಳಾದ ಬ್ಯಾಟರಾಯಗೌಡ, ಲೇಪಾಕ್ಷಿಗೌಡ, ಕುಮಾರ್ ಅಧಿಕಾರಿಗಳು ದಾಳಿ ಮಾಡಿ ವೆಂಕಟೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ








