ಕಲಬುರಗಿ : ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
BIGG NEWS : ಪೊಲೀಸ್ ಇಲಾಖೆ ಸಿಬ್ಬಂದಿಯ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರು ಬಿ ಗ್ರಾಮದ ನಿವಾಸಿಯಾದ ಕಲ್ಯಾಣಿ ಗುಗ್ಗರಿ(45) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕಳೆದ ರಾತ್ರಿ ಗಣೇಶ ವಿಸರ್ಜನೆ ಸಮಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ ಸುಸ್ತಾಗುತ್ತಿದ್ದರಿಂದ ಮಾತ್ರೆ ತೆಗೆದುಕೊಳ್ಳಲು ಲಾಡ್ಜ್ನಲ್ಲಿದ್ದ ತಮ್ಮ ಕೋಣೆಗೆ ಹೋಗಿದ್ದರು.
BIGG NEWS : ಪೊಲೀಸ್ ಇಲಾಖೆ ಸಿಬ್ಬಂದಿಯ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ
ಈ ವೇಳೆ ಕಲ್ಯಾಣಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಸ್ವಲ್ಪ ಹೊತ್ತು ಅಲ್ಲಿಯೇ ವಿಶ್ರಾಂತಿ ಪಡೆದಿದ್ದರು. ಆದರೆ ನಸುಕಿನ ಜಾವ ನಾಲ್ಕು ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದೆ.
ನಂತರ ಆಸ್ಪತ್ರೆಗೆ ಹೋಗಲು ಕಲ್ಯಾಣಿ ಅವರು ಆಂಬುಲೆನ್ಸ್ಗೆ ಕರೆ ಮಾಡಿದ್ದಾರೆ. ಆದರೆ ಆಸ್ಪತ್ರೆಗೆ ಹೋಗುವ ಮುನ್ನವೇ ದಾರಿ ಮಧ್ಯೆಯೇ ಕಲ್ಯಾಣಿ ಮೃತಪಟ್ಟಿದ್ದಾರೆ.
BIGG NEWS : ಪೊಲೀಸ್ ಇಲಾಖೆ ಸಿಬ್ಬಂದಿಯ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ