ಬೆಳಗಾವಿ: ನಿನ್ನೆ ರಾತ್ರಿ ಪೊಲೀಸ್ ಠಾಣೆಯಲ್ಲೇ ಭರ್ಜರಿ ಎಣ್ಣೆ ಪಾರ್ಟಿಯನ್ನು ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಒಬ್ಬರು ಮಾಡಿದ್ದರು. ಈ ಎಲ್ಲಾ ಪೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಹೆಡ್ ಕಾನ್ಸ್ ಸ್ಟೇಬಲ್ ಅನ್ನು ಅಮಾನತುಗೊಳಿಸಿ ಎಸ್ ಪಿ ಆದೇಶಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ ಸ್ಟೇಬಲ್ ರಾಮಚಂದ್ರಪ್ಪ ಎಂಬುವರು ಎಣ್ಣೆ ಪಾರ್ಟಿ ಮಾಡಿದ್ದರು. ಪೊಲೀಸ್ ಠಾಣೆಯಲ್ಲಿ ಮದ್ಯ ಸೇವನೆ ಮಾಡಿದ ಖಾಲಿ ಬಾಟಲಿಗಳು ಟೇಬಲ್ ಮೇಲೆ ಇದ್ದಂತ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.
ಈ ಬೆನ್ನಲ್ಲೇ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ತನಿಖೆಗೆ ಸೂಚಿಸಿದ್ದರು. ಈ ತನಿಖೆಯಲ್ಲಿ ನಿನ್ನೆ ರಾತ್ರಿ ಅಂಕಲಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ರಾಮಚಂದ್ರಪ್ಪ ಎಣ್ಣೆ ಪಾರ್ಟಿ ಮಾಡಿದ್ದು ಖಚಿತಗೊಂಡಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ.
‘ವಾಲ್ಮೀಕಿ ನಿಗಮದ ಪ್ರಕರಣ’ದಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ಸಚಿವ ಬಿ.ನಾಗೇಂದ್ರ ಸ್ಪಷ್ಟನೆ
BREAKING : ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಪುಂಡರು : ಮೂವರ ಬಂಧನ