ಬೆಂಗಳೂರು : ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾ ವಿವಾದ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ಮುಂದುವರೆದು, ವೀರಗಾಸೆ ಕಲಾವಿದರು ಇಂದು ನಗರದ ಫಿಲ್ಮ್ ಚೇಂಬರ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಸಿನಿಮಾದಲ್ಲಿ ಅವಹೇಳನಕಾರಿ ದೃಶ್ಯವನ್ನು ತೆಗೆದುಹಾಕಬೇಕು, ವೀರಗಾಸೆಗೆ ಅವಮಾನ ಮಾಡಿರುವ ಧ್ವನಿ ಹಾಗೂ ದೃಶ್ಯಕ್ಕೆ ಕತ್ತರಿ ಹಾಕಬೇಕು ಎಂದು ವೀರಗಾಸೆ ಕಲಾವಿದರು ನಗರದ ಫಿಲ್ಮ್ ಚೇಂಬರ್ ಎದುರು ಧರಣಿ ನಡೆಸುತ್ತಿದ್ದಾರೆ.
ಹೆಡ್ ಬುಷ್ ಸಿನಿಮಾ ವಿವಾದಕ್ಕೆ ರಾಜಕೀಯ ತಿರುವು
ಹೆಡ್ ಬುಷ್ ಸಿನಿಮಾದ ವಿವಾದ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಹೌದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ವೀರಗಾಸೆ ಕುರಿತಾಗಿ ಟ್ವಿಟ್ ಮಾಡುತ್ತಿದ್ದಂತೆಯೇ ಅನೇಕರು ಅವರ ಮೇಲೆ ಮುಗಿ ಬಿದ್ದಿದ್ದು, ಜಾನಪದ ಕಲಾವಿದರಿಗೂ ಮಾಸಾಶನ ನೀಡುವಂತೆ ಆಗ್ರಹಿಸಿದ್ದಾರೆ.
ಬರೀ ಒಂದು ಸಮುದಾಯಕ್ಕೆ ಮಾತ್ರ ಮಾಸಾಶನ ಕೊಟ್ಟಿದ್ದೀರಿ. ವೀರಗಾಸೆ, ಕಂಸಾಳೆ ಹೀಗೆ ಎಲ್ಲ ಜಾನಪದ ಪ್ರಕಾರದ ಕಲಾವಿದರಿಗೂ ಕೊಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹ ವ್ಯಕ್ತವಾಗಿದೆ. ಬರೀ ನಿಮ್ಮ ಭಾಗದ ಕಲಾವಿದರಿಗೆ ಮಾತ್ರ ಮಾಸಾಶನ ನೀಡಿ ತಾರತಮ್ಯ ತೋರುತ್ತಿದ್ದೀರಿ. ನಿಮಗೆ ವೀರಗಾಸೆಯ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ, ಕೂಡಲೇ ಅವರಿಗೂ ಮಾಸಾಶನ ನೀಡಬೇಕು ಎಂದು ಹಲವರು ಆಗ್ರಹಿಸಿದ್ದಾರೆ. ಆದರೆ ಸಚಿವರು ಮಾತ್ರ ಯಾವ ಪ್ರತಿಕ್ರಿಯೆ ಕೂಡ ನೀಡಲಿಲ್ಲ, ಇದಕ್ಕೆ ಸರ್ಕಾರ ಯಾವ ರೀತಿ ಪ್ರತಿಕ್ರಿಯೆ ಕೊಡುತ್ತದೆ ಎಂಬುದನ್ನು ಕಾದು ನೋಡಬೇಕು.
BIGG NEWS : ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ಗೆ ಪೆರೋಲ್ : ದೆಹಲಿ ಮಹಿಳಾ ಆಯೋಗ ಆಕ್ರೋಶ
BREAKING NEWS : ಬೆಳಗಾವಿ ಕಲುಷಿತ ನೀರು ಸೇವನೆ ಪ್ರಕರಣ : ಮುದೇನೂರಿನ ಮತ್ತೋರ್ವ ವೃದ್ದ ಸಾವು
BIGG NEWS : ಬೆಂಗಳೂರು ರಸ್ತೆಯಲ್ಲಿ ಗುಂಡಿಯಿದ್ರೆ ಬಿಬಿಎಂಪಿ ಇಂಜಿನಿಯರ್ ಗೆ ದಂಡ ಹಾಕಿ : ಸಾರ್ವಜನಿಕ ಭಾರೀ ಬೇಡಿಕೆ