ಬೆಂಗಳೂರು : ರಾಜ್ಯಾದ್ಯಂತ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆರೋಗ್ಯ ಕಾಪಾಡಿಕೊಳ್ಳಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.
ಭಾರತೀಯ ಹವಾಮಾನ ಇಲಾಖೆಯು ಪ್ರಸ್ತುತ ಹಾಗೂ ಮೇ ಅಂತ್ಯದವರೆಗೆ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚರಿಕೆಯನ್ನು ನೀಡಿರುತ್ತದೆ. ಜಿಲ್ಲೆಯಲ್ಲಿ ಸೂರ್ಯನ ಶಾಖವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಸ್ಟೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಎಲ್ಲಾ ಸಾರ್ವಜನಿಕರಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡ ಸಲಹೆಗಳನ್ನು ನೀಡಿದೆ.
ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ/ಛತ್ರಿ ಬಳಸಿರಿ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯುವುದು.
ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸುವುದು, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು.
ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಿರಿ, ಹಿರಿಯ ನಾಗರಿಕರು
ಹಾಗೂ ಮಕ್ಕಳು ಹೆಚ್ಚು ನೀರು ಕುಡಿಯುವುದು. ಬೆಳ್ಳಿಗೆ 11 ರಿಂದ ಸಂಜೆ 4 ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿ.
ಸಾಕಷ್ಟು ನೀರು ಕುಡಿಯಿರಿ, ಮಜ್ಜಿಗೆ ಮತ್ತು ಗ್ಲಕೋಸ್/ಓ.ಆರ್.ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಿ.
ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ (Use window, shades, Fanning and cross Ventilation).
ಹೀಟ್ ಸ್ಟೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟಿಯನ್ನು ಹೊಂದಿರುವಂತೆ ನೋಡಿಕೊಂಡು. ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಬಾತ್ ಮಾಡಬೇಕು ಅಥವಾ ಐಸ್ ಪ್ಯಾಕ್ ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಪ್ಯಾಕ್ ಗಳ ಮಧ್ಯ ಇಡಬಹುದು.
ಹೀಟ್ ವೇವ್ ಸ್ಟೋಕ್ ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ, ಅವರನ್ನು ಕೂಲಿಂಗ್ ವ್ಯವಸ್ಥೆಯೊಂದಿಗೆ ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು.
ಹೊರಾಂಗಣದಲ್ಲಿ ಬಿಸಿಲಿನಲ್ಲಿ ಕೆಲಸ ಮಾಡುವವರಿಗೆ ನಿಗದಿಪಡಿಸುವುದು. ಕಡ್ಡಾಯ ವಿರಾಮವನ್ನು/
ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬಾರದು.
ಬೇಸಿಗೆ ದಿನಗಳಲ್ಲಿ ತಣ್ಣೀರಿ ಸ್ನಾನ ಒಳ್ಳೆಯದು.