ಶಿವಮೊಗ್ಗ: ದಿನಾಂಕ 02-12-2024ರಂದು ಸೊರಬ ತಾಲ್ಲೂಕು ಆರೋಗ್ಯ ಇಲಾಖೆಯಿಂದ ವಿಶ್ವ ಏಡ್ಸ್ ದಿನಾಚರಣೆಯ ಸಲುವಾಗಿ ಅರಿವು ಜಾಥಾ ಹಾಗೂ ಕಾರ್ಯಕ್ರಮವನ್ನು ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನಯ್ ಪಾಟೀಲ್ ಅವರು, ದಿನಾಂಕ 02-12-2024ರಂದು ಬೆಳಿಗ್ಗೆ 9.30ಕ್ಕೆ ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅರಿವು, ಜಾಥಾ ಹಾಗೂ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಅಂತ ತಿಳಿಸಿದ್ದಾರೆ.
ಡಿ.2ರ ಕಾರ್ಯಕ್ರಮದಲ್ಲಿ ಏಡ್ಸ್ ಕುರಿತಂತೆ ಜಾಗೃತಿಯನ್ನು ಜನರಲ್ಲಿ ಮೂಡಿಸಲಾಗುತ್ತದೆ. ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಜಾಥಾ ನಡೆಸಿ, ಸಾರ್ವಜನಿಕರಲ್ಲಿ ಹೆಚ್ಐವಿ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದೇವೆ. ಸಭಾ ಕಾರ್ಯಕ್ರಮದಲ್ಲಿ ಏಡ್ಸ್ ಬಗ್ಗೆ ಜನರಿಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಸೊರಬ ನಾಗರೀಕರು ಭಾಗಿಯಾಗುವಂತೆ ಮನವಿ ಮಾಡಿದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೇ ಕೇಸ್: ನ್ಯಾಯಾಲಯಕ್ಕೆ ಎಸ್ಐಟಿಯಿಂದ ಚಾರ್ಜ್ ಶೀಟ್ ಸಲ್ಲಿಕೆ
BIG NEWS : ಯಾರು ಕಣ್ಣೀರು ಹಾಕಬಾರದು, ನಾವು ಸತ್ತಿಲ್ಲ ಸೋತಿದ್ದೇವೆ ಅಷ್ಟೇ : ನಿಖಿಲ್ ಕುಮಾರಸ್ವಾಮಿ ಹೇಳಿಕೆ