ಬೆಳಗಾವಿ : ಪ್ರೀತಿಸಿಗೆ ರಾಜ್ಯಾದ್ಯಂತ ನಕಲಿ ವೈದ್ಯರ ಹಾವಳಿ ಹೆಚ್ಚುತ್ತಿದ್ದು ಇದರಿಂದ ಅನೇಕ ರೋಗಿಗಳ ಸಾವಿಗೂ ಕೂಡ ಕಾರಣರಾಗುತ್ತಿದ್ದಾರೆ ಇದೀಗ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಕಲಿ ವೈದ್ಯರ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಹೌದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ದೂರು ಬಂದ ಹಿನ್ನೆಲೆ ಖಚಿತ ಮಾಹಿತಿಯ ಮೇರೆಗೆ ಮೂಡಲಗಿ ತಾಲೂಕಿನಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರೆಲ್ಲರೂ ನಕಲಿ ವೈದ್ಯರು ಎಂದು ದಾಳಿಯ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿದುಬಂದಿದೆ.
ಅಧಿಕಾರಿಗಳು ಒಟ್ಟು ನಾಲ್ಕು ಆಸ್ಪತ್ರೆಗಳನ್ನು ಸೀಜ್ ಮಾಡಿದ್ದಾರೆ. ನಕಲಿ ವೈದ್ಯರ ಹಾವಳಿ ಕುರಿತು ದೂರು ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ವಿಶ್ವನಾಥ್ ಭೋವಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದರು. ಯಾದವಾಡದಲ್ಲಿ ತೆರೆಯಲಾಗಿದ್ದ ಅನಧಿಕೃತ ಆಸ್ಪತ್ರೆಗೆ ಬೀಗ ಹಾಕಿದರು.