ಬೆಂಗಳೂರು : ಸರ್ಕಾರ ಮತ್ತು ಜನರ ನಡುವಿನ ಕೊಂಡಿಯಂತೆ ಕೆಲಸ ಮಾಡುವ ಸರ್ಕಾರಿ ನೌಕರರಿಗೆ ನಮ್ಮ ಸರ್ಕಾರವು ಆರೋಗ್ಯ ಭದ್ರತೆ ಕಲ್ಪಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅಕ್ಟೋಬರ್ 1ರಿಂದ ಜಾರಿ ಮಾಡಲಾಗುತ್ತಿದ್ದು, ಇದರಿಂದ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರಿಗೆ ನಗದು ರಹಿತ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗಲಿದೆ ಎಂದು ಹೇಳಿದ್ದಾರೆ.
ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದಲ್ಲಿ ನಮ್ಮ ಜೊತೆ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತಕಾಯಲು ನಾವು ಸದಾ ಬದ್ಧರಿದ್ದೇವೆ ಎಂದು ತಿಳಿಸಿದ್ದಾರೆ.
ಸರ್ಕಾರ ಮತ್ತು ಜನರ ನಡುವಿನ ಕೊಂಡಿಯಂತೆ ಕೆಲಸ ಮಾಡುವ ಸರ್ಕಾರಿ ನೌಕರರಿಗೆ ನಮ್ಮ ಸರ್ಕಾರವು ಆರೋಗ್ಯ ಭದ್ರತೆ ಕಲ್ಪಿಸಿದೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅಕ್ಟೋಬರ್ 1ರಿಂದ ಜಾರಿ ಮಾಡಲಾಗುತ್ತಿದ್ದು, ಇದರಿಂದ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರಿಗೆ ನಗದು ರಹಿತ ಗುಣಮಟ್ಟದ ಚಿಕಿತ್ಸಾ… pic.twitter.com/yGZG8I5EwT
— Siddaramaiah (@siddaramaiah) September 24, 2025







