ದಕ್ಷಿಣ ಕನ್ನಡ: ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನ ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಸಚಿವರು ಮಾತನಾಡುತ್ತಿದ್ದರು.
ಸಾರ್ವಜನಿಕರಿಗೆ ತಾಲೂಕು ಆಸ್ಪತ್ರೆಗಳಲ್ಲಿಯೇ ಹೆಚ್ಚಿನ ಚಿಕಿತ್ಸಾ ಸೌಲಭ್ಯಗಳನ್ನ ಒದಗಿಸಿಕೊಡುವುದು ಅತಿ ಮುಖ್ಯವಾಗಿದೆ. ಜನರು ಜಿಲ್ಲಾಸ್ಪತ್ರೆಗಳೆ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಜಿಲ್ಲಾಸ್ಪತ್ರೆಗಳಲ್ಲಿ ಸಿಗುವ ಸೌಲಭ್ಯಗಳನ್ನ ತಾಲೂಕು ಆಸ್ಪತ್ರೆಗಳಲ್ಲಿಯೇ ನೀಡುವ ಮೂಲಕ ಜನರ ಸಮೀಪಕ್ಕೆ ಆರೋಗ್ಯ ಸೇವೆಗಳನ್ನ ಒದಗಿಸುತ್ತ ಮುಂಬರುವ ಬಜೆಟ್ ನಲ್ಲಿ ಮಹತ್ವದ ಯೋಜನೆ ಘೋಷಣೆಯಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಈ ನಿಟ್ಟಿನಲ್ಲಿ ಪ್ರಸ್ತುತ ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಸಂಖ್ಯೆಯನ್ನ ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ. ಇದರಿಂದ ರಾತ್ರಿ ವೇಳೆಯಲ್ಲಿಯೂ ಆಸ್ಪತ್ರೆಗಳಿಗೆ ಬರುವ ಜನರಿಗೆ ತಜ್ಞ ವೈದ್ಯರ ಸೇವೆ ಲಭ್ಯವಾಗಲಿದೆ. ಅಲ್ಲದೇ ತಜ್ಞ ವೈದ್ಯರಿಗೆ ಬೇಕಾಗುವ ಎಲ್ಲ ವೈದ್ಯಕೀಯ ಪರಿಕರಿಗಳನ್ನ ಸರ್ಕಾರ ತಾಲೂಕು ಆಸ್ಪತ್ರೆಗಳಲ್ಲಿಯೂ ಒದಗಿಸಲಿದೆ. ದಿನದ 24 ಗಂಟೆಯೂ ತಾಲೂಕು ಆಸ್ಪತ್ರೆಗಳು ಸಕ್ರೀಯವಾಗಿ ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಚ್ಚನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ನೂತನ ಕಟ್ಟಡವನ್ನ ನಾಲ್ಕು ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, 11 ಕೋಟಿ ವೆಚ್ಚದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರಗಳನ್ನ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಅಲ್ಲದೇ ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕಟ್ಟಡ ದುರಸ್ಥಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ವಿಸ್ತ್ರತವಾದ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
‘BPL, APL ಕಾರ್ಡ್’ದಾರರೇ ಗಮನಿಸಿ: ಜ.31 ‘e-KYC’ಗೆ ಲಾಸ್ಟ್ ಡೇಟ್, ಮಾಡಿಸದಿದ್ರೆ ಬರಲ್ಲ ರೇಷನ್
ರಾಜ್ಯದ ‘ದ್ವಿತೀಯ PUC ವಿದ್ಯಾರ್ಥಿ’ಗಳ ಗಮನಕ್ಕೆ: ‘ಅಂಕಪಟ್ಟಿ’ಯಲ್ಲಿನ ‘ತಪ್ಪು ತಿದ್ದುಪಡಿ’ಗೆ ಅವಕಾಶ