ಬೆಂಗಳೂರು: ಮುಡಾ ಹಗರಣ ಸಂಬಂಧ ಸಚಿವ ಭೈರತಿ ಸುರೇಶ್ ಅವರಿಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿ ಶಾಕ್ ನೀಡಿದ್ದರು. ಈ ಸಮನ್ಸ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠ ಆರಂಭಿಸಿದೆ.
ಇಂದು ಹೈಕೋರ್ಟ್ ನಲ್ಲಿ ಸಚಿವ ಭೈರತಿ ಸುರೇಶ್ ಇಡಿ ಸಮನ್ಸ್ ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಸಚಿವ ಭೈರತಿ ಸುರೇಶ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸುತ್ತಿದ್ದಾರೆ. ಡಿಬಿ ನಟೇಶ್ ವಿರುದ್ಧ ಶೋಧ, ಜಪ್ತಿ ಆದೇಶವನ್ನು ರದ್ದುಗೊಳಿಸಿದೆ. ಇಡಿ ಬಗ್ಗೆ ಕ್ರಮ ಕೈಗೊಳ್ಳುವ ಸ್ವಾತಂತ್ರ್ಯವನ್ನು ಹೈಕೋರ್ಟ್ ಗೆ ನೀಡಲಾಗಿದೆ ಎಂಬುದಾಗಿ ವಾದಿಸಿದರು.
ಇಡಿ ತನಿಖಾಧಿಗಳು ನಮೂನೆಯೊಂದನ್ನು ಕಳುಹಿಸಿದ್ದಾರೆ. ಇದರಲ್ಲಿ ಭೈರತಿ ಕುಟುಂಬದವರು, ಉದ್ಯೋಗಿಗಳ ಇತರರ ವಿವರ ಕೇಳಿದ್ದಾರೆ. ಇದು ಅವರ ಖಾಸಗಿತನದ ಸ್ಪಷ್ಟ ಉಲ್ಲಂಘನೆ ಎಂಬುದಾಗಿ ವಾದಿಸಿದರು. ಇನ್ನೂ ವಾದ ಪ್ರತಿವಾದ ನಡೆಯುತ್ತಿದ್ದು, ಹೈಕೋರ್ಟ್ ತೀರ್ಪು ಏನು ಎಂಬುದನ್ನು ಕಾದು ನೋಡಬೇಕಿದೆ.
‘ಮುಡಾ’ ಹಗರಣ :14 ಸೈಟ್ ಹಂಚಿಕೆಗೂ, ಭೈರತಿ ಸುರೇಶ್ ಗೂ ಯಾವುದೇ ಸಂಬಂಧವಿಲ್ಲ : ಸಿವಿ ನಾಗೇಶ್ ವಾದ ಮಂಡನೆ
ಸಚಿವ ಮಹಾದೇವಪ್ಪನವರೇ ವಾಲ್ಮೀಕಿ ಸಮಾಜಕ್ಕೆ ಆಗಿರುವ ಅನ್ಯಾಯದ ಬಗ್ಗೆ ಚರ್ಚೆ ಆಗುವುದು ಉತ್ತಮ: ಆರ್ ಅಶೋಕ್