ಬೆಂಗಳೂರು: ರಾಜ್ಯದಲ್ಲಿ ಯುವಕರನ್ನೇ ಹೆಚ್ಚಾಗಿ ಕಾಡುತ್ತಿದೆ ಹೃದಯಾಘಾತ ಎನ್ನುವಂತೆ ಹಾರ್ಟ್ ಅಟ್ಯಾಕ್ ನಿಂದ ಒಂದೇ ದಿನ ಮೂವರು ಬಲಿಯಾಗಿದ್ದಾರೆ.
ಹೌದು ಇಂದು ಒಂದೇ ದಿನ ಶಾಕಿಂಗ್ ನ್ಯೂಸ್ ಎನ್ನುವಂತೆ ರಾಜ್ಯದಲ್ಲಿ ಮೂವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕ್ಯಾಬ್ ಚಾಲಕ ಅಭಿಷೇಕ್ ಎಂಬುವರು ಅರ್ಟ್ ಅಟ್ಯಾಕ್ ನಿಂದ ಸಾವನ್ನಪ್ಪಿದ್ದಾರೆ.
ಇನ್ನೂ ಹಾಸನದಲ್ಲಿ 19 ವರ್ಷದ ಸಂಧ್ಯಾ ಎಂಬುವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬಾತ್ ರೂಮಿನ ಬಾಗಿಲಿನಲ್ಲೇ ಕುಸಿದು ಬಿದ್ದು ಸಂಧ್ಯಾ ಸಾವನ್ನಪ್ಪಿದ್ದಾರೆ.
ಕೊಡಗಿನಲ್ಲಿ ಅರಣ್ಯಾಧಿಕಾರಿಯಾಗಿದ್ದಂತ ದಿನೇಶ್ ಎಂಬುವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕುಶಾಲನಗರದ ಉಪ ವಲಯ ಅರಣ್ಯಾಧಿಕಾರಿಯಾಗಿದ್ದಂತ ದಿನೇಶ್ ಇಂದು ಅರ್ಟ್ ಅಟ್ಯಾಕ್ ನಿಂದ ನಿಧನರಾಗಿದ್ದಾರೆ.
GOOD NEWS: ರಾಜ್ಯದ ‘ಕ್ಯಾನ್ಸರ್ ರೋಗಿ’ಗಳಿಗೆ ಗುಡ್ ನ್ಯೂಸ್: 16 ಜಿಲ್ಲಾಸ್ಪತ್ರೆಗಳಲ್ಲಿ ‘ಕೀಮೋಥೆರಪಿ ಕೇಂದ್ರ’ ಆರಂಭ