ತುಮಕೂರು: ರಾಜ್ಯದಲ್ಲಿ ಯುವಜನತೆಯಲ್ಲಿ ಹೃದಯಾಘಾತದ ಪ್ರಕರಮಗಳು ಹೆಚ್ಚಾಗುತ್ತಿವೆ. ಇಂದು ಕಾಲೇಜಿನಿಂದ ಮನೆಗೆ ಬರುವಾಗಲೇ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಪಾವಗಡ ಸರ್ಕಾರಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಮೈಥಿಲಿ(19) ಇಂದು ಕಾಲೇಜು ಮುಗಿಸಿ ಮನೆಗೆ ಮರಳುತಿದ್ದಾಗಲೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಮೈಥಿಲಿ ಕಾಲೇಜಿನಿಂದ ಮನೆಗೆ ತೆರಳುತ್ತಿದಾಗ ಹೃದಯಾಘಾತ ಉಂಟಾಗಿದೆ. ಈ ಕಾರಣದಿಂದ ಅಲ್ಲೇ ಕುಸಿದು ಬಿದ್ದಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯೋ ಸಂದರ್ಭದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘BPL, APL ಕಾರ್ಡ್’ದಾರರೇ ಗಮನಿಸಿ: ಜ.31 ‘e-KYC’ಗೆ ಲಾಸ್ಟ್ ಡೇಟ್, ಮಾಡಿಸದಿದ್ರೆ ಬರಲ್ಲ ರೇಷನ್