ಕೋಲಾರ: ಮುಳಬಾಗಿಲು ಪಟ್ಟಣದ ಅಂಜನಾದ್ರಿ ಬೆಟ್ಟ ಬಳಿ ತಾಯಿಯೇ ತನ್ನ ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ
ಆಂಧ್ರಪ್ರದೇಶ ಮೂಲದ ಜ್ಯೋತಿ ಆತ್ಮಹತ್ಯೆಗೆ ನಿರ್ಧರಿಸಿರುವ ತಾಯಿ. ತನ್ನಿಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಸುಟ್ಟಿದ್ದಾರೆ. ಇದರಲ್ಲಿ ಒಂದು ಮಗು ಸಾವನ್ನಪ್ಪಿದ್ದು ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ.
ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮುಳಬಾಗಿಲು ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.