ವಿಜಯನಗರ : ವಿಜಯನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ತಂದೆಯ ಕಣ್ಣೇದುರಲ್ಲೇ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ದಾರುಣ ಸಾವನ್ನಪ್ಪಿದ್ದಾರೆ.
ಹೌದು ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದಲ್ಲಿ ಘಟನೆ ನಡೆದಿದೆ. ಮನು (19) ಹಾಗೂ ಪ್ರಜ್ವಲ್ (18) ಮೃತ ಸಹೋದರರು. ತಂದೆಯ ಕಣ್ಣೆದುರಲ್ಲೇ ಅಣ್ಣ-ತಮ್ಮ ಪ್ರಾಣ ಬಿಟ್ಟಿದ್ದಾರೆ.
ತಂದೆಯೊಂದಿಗೆ ತುಂಗಭದ್ರಾ ನದಿಗೆ ಮೂವರು ಸಹೋದರರು ಈಜಲು ತೆರಳಿದ್ದರು. ಇಬ್ಬರು ಸಹೋದರರು ಆಯತಪ್ಪಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ತಂದೆ ಮಂಜಪ್ಪ ಅವರ ಸಮಯ ಪ್ರಜ್ಞೆಯಿಂದ ಕೊನೆಯ ಮಗ ಚಿರಂಜೀವಿ ಸಾವಿನಿಂದ ಪಾರಾದರು.ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ








