ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗೆ ಶಿವಕುಮಾರ್ ಅವರ ನಡುವೆ ಕಿತ್ತಾಟ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗವಹಿಸಿಲ್ಲ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ.
ಹೌದು ಸಿಎಂ ಸಿದ್ದರಾಮಯ್ಯ ಎಲ್ಲಾ ಇಲಾಖೆಗಳ ಸಚಿವರ ಜೊತೆಗೂಡಿ ಇಲಾಖಾವಾರು ಸಭೆಗಳನ್ನು ಮಾಡುತ್ತಿದ್ದಾರೆ. ಆದರೆ, ನಾಯಕತ್ವ ಬದಲಾವಣೆ ನಿರೀಕ್ಷೆಯಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಈವರೆಗೆ ಯಾವುದೇ ಬಜೆಟ್ ಪೂರ್ವಭಾವಿ ಸಭೆಗಳಲ್ಲಿ ಭಾಗಿಯಾಗದೇ ಇರುವುದು ಹಲವು ಪ್ರಶ್ನೆಗಳನ್ನು ಮೂಡಿಸಿದೆ. ಡಿಸಿಎಂ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಎಲ್ಲಾ ಸಭೆಗಳನ್ನು ನಡೆಸಿದ ಬಳಿಕ ಇದೀಗ ಸಿಎಂ ಸಿದ್ದರಾಮಯ್ಯ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಕೊನೆಯ ಹಂತದ ಸಭೆಗಳನ್ನು ನಡೆಸುತ್ತಿದ್ದಾರೆ. 2026-27 ಸಾಲಿನ ಬಜೆಟ್ಗೆ ಅಂತಿಮ ಸ್ಪರ್ಶ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇನ್ನೊಂದು ವಾರದೊಳಗೆ ಬಜೆಟ್ ಪೂರ್ವಭಾವಿ ಸಭೆಗಳು ಮುಕ್ತಾಯವಾಗಲಿದೆ. ಆದರೆ, ನಾಯಕತ್ವ ಬದಲಾವಣೆ ನಿರೀಕ್ಷೆಯಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಜೆಟ್ ಪೂರ್ವಭಾವಿ ಸಭೆಗಳಿಂದ ದೂರು ಉಳಿದಿರುವುದು ಹಲವು ಅನುಮಾನ, ಪ್ರಶ್ನೆಗಳನ್ನು ಮೂಡಿಸಿದೆ.
ಮಾರ್ಚ್ 6ಕ್ಕೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ಬಜೆಟ್ ಮಂಡಿಸಲು ವೇದಿಕೆ ಸಜ್ಜಾಗಿದೆ. ಫೆಬ್ರವರಿ ಆರಂಭದಿಂದ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಪ್ರತಿ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಿದ್ದಾರೆ. ಇತ್ತ ಸಾರಿಗೆ, ಅಬಕಾರಿ, ರೈತರು, ಕಾರ್ಮಿಕ ಸಂಘಟನೆಗಳ, ವಾಣಿಜ್ಯ ಮಂಡಳಿ ಜೊತೆ ಸಿಎಂ ಸಿದ್ದರಾಮಯ್ಯ ಪ್ರತ್ಯೇಕವಾಗಿ ಸಭೆಗಳನ್ನು ನಡೆಸಿ ಅವರ ಬೇಡಿಕೆಗಳು, ಮನವಿಗಳನ್ನು ಆಲಿಸಿದ್ದಾರೆ.








