ಬೆಂಗಳೂರು: ನಗರದಲ್ಲಿ ಸತತವಾಗಿ ಒಂದು ಗಂಟೆಯಿಂದ ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದೆ. ನಗರದ ಶಾಂತಿನಗರ, ಕೋರಮಂಗಲ, ಮೆಜೆಸ್ಟಿಕ್ ಮಲ್ಲೇಶ್ವರಂ , ಯಶವಂತಪುರ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದಾಗಿ ಟ್ರಾಫಿಕ್ ಉಂಟಾಗಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ.
ಇನ್ನು ರಾಜ್ಯಾಧ್ಯಂತ ಮತ್ತೆ ಐದು ದಿನ ಭಾರೀ ಮಳೆಯಾಗಲಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು, ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿಯ ಬೀಸುವಿಕೆಯ ಪರಿಣಾಮದಿಂದಾಗಿ ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಒಳನಾಡು, ಕರಾವಳಿ ಹಾಗೂ ರಾಜ್ಯದ ರಾಜಧಾನಿ ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 5 ದಿನ ಭಾರೀ ಮಳೆಯಾಗಲಿದೆ. ಹೀಗಾಗಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.