ಮಂಗಳೂರು/ಕೊಡಗು : ರಾಜ್ಯದಲ್ಲಿ ಮಳೆ ಆರ್ಭಟಿಸುತ್ತಿದೆ. ಇಂದು ಕೂಡ ಕೆಲ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಭಾರೀ ಮಳೆಯ ಮುನ್ಸೂಚನೆ ಕಾರಣ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ಘೋಷಣೆ ಮಾಡಲಾಗಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರಾವಳಿಯ ಜಿಲ್ಲೆಯಾಗಿರುವಂತ ಮಂಗಳೂರಿನಲ್ಲಿ ಸತತ ಮಳೆಯಾಗುತ್ತಿದೆ. ಇಂದು ಕೂಡ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಡಿಸಿ ದರ್ಶನ್ ಹೆಚ್.ವಿ ಅವರು ಘೋಷಣೆ ಮಾಡಿದ್ದಾರೆ.
ಇಂದು ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಇತ್ತ ಕೊಡಗು ಜಿಲ್ಲೆಯಲ್ಲಿ ನಿನ್ನೆ ಕೂಡ ರಜೆಯನ್ನು ಮಳೆಯ ಕಾರಣ ನೀಡಲಾಗಿತ್ತು. ಇಂದು ಕೂಡ ಆರೇಂಜ್ ಅಲರ್ಟ್ ಇರುವ ಕಾರಣ ಕೊಡಗು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಘೋಷಿಸಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರ, ಸೊರಬ ತಾಲ್ಲೂಕಿನ ಶಾಲೆಗಳಿಗೆ ರಜೆ
ನಿನ್ನೆ ಸಾಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆ ಯಾಗುತ್ತಿರುವುದರಿಂದ ಇಂದು ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ದಿನಾಂಕ 25.07.2025ರ ಇಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ ಮತ್ತು ಪ್ರಾಥಮಿಕ ಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿವಸಗಳಲ್ಲಿ ಶಾಲೆಗಳನ್ನು ನಡೆಯಿಸಿ ಪಾಠ ಪ್ರವಚನಗಳನ್ನು ಸರಿದೂಗಿಸಲು ಸಾಗರ ತಹಶೀಲ್ದಾರ್ ಚಂದ್ರಶೇಖರ ನಾಯ್ ಸೂಚಿಸಿದ್ದಾರೆ.
ಇಂದು ಸೊರಬ ತಾಲ್ಲೂಕಿನಲ್ಲಿ ವ್ಯಾಪ ಮಳೆಯಾಗು ಮುನ್ಸೂಚನೆಯನ್ನು ಹವಾಮಾನ ಬದಲಾವಣೆಗೆ ಇಲಾಖೆ ನೀಡಿದೆ. ಜೊತೆಗೆ ಆರೆಂಜ್ ಅಲರ್ಟ್ ಇರುವ ಕಾರಣ ದಿನಾಂಕ 25-7-25ರ ಇಂದು ಸೊರಬ ತಾಲೂಕಿನಾದ್ಯಂತ ಮಕ್ಕಳ ಹಿತದೃಷ್ಟಿಯಿಂದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಅಂಗನವಾಡಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ರಜಾ ದಿವಸಗಳಲ್ಲಿ ಶಾಲೆಗಳನ್ನು ನಡೆಯಿಸಿ ಈ ರಜೆಯನ್ನು ಸರಿದೂಗಿಸಲು ಸೊರಬ ತಹಶೀಲ್ದಾರ್ ಮಂಜುಳ ಆದೇಶದಲ್ಲಿ ಸೂಚಿಸಿದ್ದಾರೆ.
ಇಂದಿನಿಂದ ನಾಲ್ಕು ದಿನ ಈ ಜಿಲ್ಲೆಯಲ್ಲಿ ಭಾರೀ ಮಳೆ: ರೆಡ್, ಆರೇಂಜ್ ಅಲರ್ಟ್ ಘೋಷಣೆ
ಈ ಸಂಬಂಧ ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ರಾಜ್ಯದ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ. ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುವ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಿದೆ.
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು. #KSNDMC #ಮುಂಗಾರುಮಳೆ #ಸುರಕ್ಷಿತವಾಗಿರಿ #ಎಚ್ಚರಿಕೆವಹಿಸಿ pic.twitter.com/7oSpNcVk4W
— Karnataka State Natural Disaster Monitoring Centre (@KarnatakaSNDMC) July 24, 2025
ನಿನ್ನೆ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಿದ್ದರೇ, ಬೀದರ್, ಕಲಬುರ್ಗಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ಚಿತ್ರದುರ್ಗ, ತುಮಕೂರು, ಮೈಸೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಆರೆಂಟ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಮತ್ತು ನಾಳೆ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ನೀಡಿದ್ದರೇ, ಮೈಸೂರು, ಮಂಡ್ಯ, ಹಾಸನ, ಕೊಡಗು ಸೇರಿದಂತೆ ಇತರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಿನಾಂಕ 28-07-2025ರಂದು ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಆರೇಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ.