ಉತ್ತರ ಕನ್ನಡ: ನಾಳೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆ ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಈ ಸಂಬಂಧ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದು, ನಾಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ನಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಘೋಷಣೆ ಮಾಡಿರುವುದಾಗಿ ತಿಳಿಸಿದೆ.
ಹವಾಮಾನ ಇಲಾಖೆಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಕಾರಣ, ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಈ ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.
BIG NEWS : ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್