ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 5 ತಾಲ್ಲೂಕಿನ ಶಾಲೆಗಳಿಗೆ DC ರಜೆ ಘೋಷಣೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಗಾಯುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಿ ಡಿಸಿ ಆದೇಶಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯ ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ ಮತ್ತು ನರಸಿಂಹರಾಜಪುರ ತಾಲ್ಲೂಕಿನಲ್ಲಿ ತೀವ್ರವಾಗಿ ಮಳೆಯಾಗುತ್ತಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ದಿನಾಂಕ 27-06-2025ರ ನಾಳೆ ರಜೆ ನೀಡಲಾಗಿದೆ ಎಂದಿದ್ದಾರೆ. … Continue reading ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 5 ತಾಲ್ಲೂಕಿನ ಶಾಲೆಗಳಿಗೆ DC ರಜೆ ಘೋಷಣೆ