ಮಂಗಳೂರು : ಇಂದು ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ ಜಿಲ್ಲೆಗಳ ಎಲ್ಲ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಂಗಳೂರು ತಾಲೂಕಿನಲ್ಲಿ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ವರೆಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ನದಿ, ಸಮುದ್ರ ತೀರ ಪ್ರದೇಶಗಳಿಗೆ ಸಾರ್ವಜನಿಕರು ತೆರಳದಂತೆ ಸೂಚನೆ ನೀಡಿದ್ದಾರೆ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ
ಇನ್ನು ಭಾರಿ ಮಳೆ ಹಿನ್ನೆಲೆಯಲ್ಲಿ ಎಂದು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ, ಐಟಿಐ ಕಾಲೇಜು ಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಇಂದು ರಜೆ ನೀಡಿ ಉಡುಪಿ ಜಿಲ್ಲಾಧಿಕಾರಿ ಟೀ.ಕೆ ಸ್ವರೂಪ ಆದೇಶ ಹೊರಡಿಸಿದ್ದಾರೆ