ಉತ್ತರ ಕನ್ನಡ, ಹಾಸನ, ಬೆಳಗಾವಿ: ಭಾರೀ ಮಳೆಯ ಹಿನ್ನಲೆಯಲ್ಲಿ ರಾಜ್ಯದ ಉತ್ತರ ಕನ್ನಡ, ಬೆಳಗಾವಿ, ಹಾಸನ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟಿಸುತ್ತಿದೆ. ಈ ಹಿನ್ನಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಹಾಸನ ಡಿಸಿ ಕೆ ಎಸ್ ಲತಾಕುಮಾರಿ ಘೋಷಿಸಿ ಆದೇಶಿಸಿದ್ದಾರೆ.
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಆರ್ಭಟ ಮುಂದುವರೆದಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ತಹಶೀಲ್ದಾರ್ ಶೈಲೇಶ್ ಪರಮಾನಂದ ಘೋಷಣೆ ಮಾಡಿದ್ದಾರೆ.
ಇನ್ನೂ ಬೆಳಗಾವಿ ಜಿಲ್ಲೆಯ ಬೆಳಗಾವಿ, ಖಾನಾಪುರ ತಾಲ್ಲೂಕಿನಲ್ಲೂ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಬೆಳಗಾವಿ, ಖಾನಾಪುರ ತಾಲ್ಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ನೀಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.
BREAKING: ಐಶ್ವರ್ಯ ಗೌಡಗೆ ಮತ್ತೊಂದು ಬಿಗ್ ಶಾಕ್: ಇಡಿಯಿಂದ ಪಿಎಂಎಲ್ಎ ಕಾಯ್ದೆಯಡಿ ಕೇಸ್ ದಾಖಲು
ದೊಡ್ಡರಂಗೇಗೌಡ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ: ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುವುದಾಗಿ ಘೋಷಣೆ