ಗುಜರಾತ್ : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಇದರಿಂದ ಜನರು ಹೈರಾಣಾಗಿದ್ದು, ರಸ್ತೆಗಳೆಲ್ಲ ತುಂಬಿ ಜಲಾವೃತವಾಗಿದೆ. ಇದೀಗ ಗುಜರಾತ್ ನವಸಾರಿಜಿಲ್ಲೆಯ ಕೆಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಹಲವಾರು ಪ್ರದೇಶಗಳಲ್ಲಿ ಪ್ರವಾಹ ಮತ್ತು ಜಲಾವೃತವಾಗಿದೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪೂರ್ಣಾ, ಅಂಬಿಕಾ ಮತ್ತು ಕಾವೇರಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.ಭಾರಿ ಮಳೆ ಮತ್ತು ಪ್ರವಾಹದಂತಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜುಲೈ 14 ರಂದು ನವಸಾರಿಯಲ್ಲಿ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳನ್ನು ರಜೆ ಘೋಷಿಸಲಾಗಿದೆ.
ಜಿಲ್ಲೆಯ ಹಲವಾರು ಗ್ರಾಮಗಳು ಜಲಾವೃತಗೊಂಡಿವೆ ಮತ್ತು ನವಸಾರಿಯನ್ನು ಸಂಪರ್ಕಿಸುವ ಸೂರತ್ ಹೆದ್ದಾರಿಯನ್ನು ವಾಹನ ಸಂಚಾರಕ್ಕೆ ಸ್ಥಗಿತಗೊಳಿಸಲಾಗಿದೆ.