ಬೆಂಗಳೂರು: ಕೊಂಚ ಬಿಡುವು ಕೊಟ್ಟು, ಮತ್ತೆ ಆರಂಭಗೊಂಡಿರುವಂತ ಮಳೆ, ನಾಳೆಯಿಂದ ಮತ್ತಷ್ಟು ಚುರುಕುಗೊಳ್ಳಲಿದೆ. ನಾಳೆಯಿಂದ ರಾಜ್ಯಾಂಧ್ಯತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ನಾಳೆಯಿಂದ ಆಗಸ್ಟ್.23ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಆಗಸ್ಟ್.18ರ ನಾಳೆ ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗಲಿದೆ. ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಧಾರವಾಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಹಾವೇರಿ, ರಾಮನಗರ, ಬೆಂಗಳೂರಲ್ಲಿ ಯೆಲ್ಲೋ ಅಲರ್ಟ್ ನೀಡಿದೆ. ಬೆಳಗಾವಿ, ವಿಜಯಪುರ, ಕಲಬುರ್ಗಿ ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ.
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. ಮೂಲ: ಐಎಂಡಿ ಬೆಂಗಳೂರು. #KSNDMC #ಮುಂಗಾರುಮಳೆ #ಸುರಕ್ಷಿತವಾಗಿರಿ #ಎಚ್ಚರಿಕೆವಹಿಸಿ #KarnatakaRains @KarnatakaVarthe pic.twitter.com/OLVDiwD7pR
— Karnataka State Natural Disaster Monitoring Centre (@KarnatakaSNDMC) August 17, 2025
ದಿನಾಂಕ 19-08-2025ರಂದು ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಚಿತ್ರದುರ್ಗ, ತುಮಕೂರು ಸೇರಿದಂತೆ 22 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಿನಾಂಕ 20-08-2025ರಂದು ಮೂರು ಜಿಲ್ಲೆ ಹೊರತು ಪಡಿಸಿ, ಇನ್ನುಳಿದ ಎಲ್ಲಾ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೇಂಜ್ ಅಲರ್ಟ ಘೋಷಿಸಲಾಗಿದೆ.
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
ರಾಜ್ಯದಾದ್ಯಂತ ಜೋರಾದ ಗಾಳಿಯೊಂದಿಗೆ ಚದುರದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಇಂದಿನಿಂದ ಆಗಸ್ಟ್ 20 ರವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತಿ ಭಾರಿ ಹಾಗೂ 19 ರಂದು ಅತ್ಯಅಧಿಕ ಮಳೆಯಾಗುವ ಸಾಧ್ಯತೆಯಿದೆ. pic.twitter.com/EmPkdPjvC1— Karnataka State Natural Disaster Monitoring Centre (@KarnatakaSNDMC) August 17, 2025
CRIME NEWS: ಬೆಂಗಳೂರಲ್ಲಿ ತ್ರಿಕೋನ ಪ್ರೇಮಕಥೆ: ‘ಹೊಸ ಬಾಯ್ ಫ್ರೆಂಡ್’ಗೆ ಚಾಕು ಇರಿದ ಹಳೇ ಲವರ್
ಪರಿಷ್ಕೃತ ಜಿಎಸ್ಟಿ ದರಗಳಿಂದ ಯಾವ ವಸ್ತುಗಳು ಅಗ್ಗವಾಗಬಹುದು? ಇಲ್ಲಿದೆ ಡೀಟೆಲ್ಸ್ | GST bonanza