ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ, ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಇದಲ್ಲದೇ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಈ ಬಗ್ಗೆ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಮೇ.24ರಿಂದ ಮೇ.27ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ನೀಡಲಾಗಿದೆ ಎಂದಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಮೇ.27ರವರೆಗೆ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಇನ್ನೂ ರಾಜ್ಯದ ಇತರೆಡೆ ಸಾಧಾರಣ ಮಳೆಯಾಗಲಿದೆ. ಹೀಗಾಗಿ ಜನರು ಮುಂಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ತಜ್ಞ ಮನವಿ ಮಾಡಿದ್ದಾರೆ.
ಮೈಸೂರು ರೈಲ್ವೆ ರಕ್ಷಣಾ ಪಡೆಯಿಂದ ತ್ವರಿತ ಕಾರ್ಯಾಚರಣೆ: ರೈಲಿನಲ್ಲಿ ಮಹಿಳೆ ಬಿಟ್ಟು ಹೋಗಿದ್ದ ಬ್ಯಾಗ್ ವಾಪಾಸ್ಸು
BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ