ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮುಂದಿನ 28 ಗಂಟೆಯಲ್ಲಿ ಸಹಿತ ಗುಡುಗು ಮಳೆಯಾಗುವ ಸಾಧ್ಯತೆಯಿದೆ, 30-40 ಕಿಮೀ ವೇಗದ ಗಾಳಿ ಜೊತೆ ಭಾರಿ ‘ಮಳೆ’ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ತಮಿಳುನಾಡಿನಲ್ಲಿ ಸುಳಿಗಾಳಿ ಉಂಟಾಗಿದ್ದು, ಇದರ ಪರಿಣಾಮ ಕರ್ನಾಟಕದ ಮೇಲೆ ಸಹ ಪರಿಣಾಮ ಬೀರಲಿದೆ. ಈ ಸುಳಿಗಾಳಿಯ ಪರಿಣಾಮದಿಂದ ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡು ಸೇರಿ ಕರಾವಳಿ ಹಾಗೂ ಉತ್ತರ ಒಳನಾಡು ಭಾಗದಲ್ಲಿ ಸಹ ಗುಡುಗು ಸಹಿತ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದು ಸಂಜೆ ಅಥವಾ ರಾತ್ರಿಯ ವೇಳೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ತಲುಪಲಿದೆ ಎಂದು ಇಲಾಖೆ ತಿಳಿಸಿದೆ. ಮುಂದಿನ ಐದು ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ತುಮಕೂರು, ರಾಮನಗರ ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಒಳನಾಡಿನ ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಂಪುಟ ವಿಸ್ತರಣೆ ಕಸರತ್ತು : ಸೋನಿಯಾ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ
‘ನಾವು ಘೋಷಿಸಿರುವ 5 ಗ್ಯಾರೆಂಟಿಗಳು ಶೀಘ್ರವೇ ಜಾರಿಗೆ ಬರಲಿದೆ’ : ಸಚಿವ ರಾಮಲಿಂಗಾ ರೆಡ್ಡಿ ಭರವಸೆ