BREAKING: ಬೆಂಗಳೂರು ನಗರದಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ಮರಬಿದ್ದು 3 ಕಾರು, 4 ಬೈಕ್ ಜಖಂ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಭೋರ್ಗರೆದ ಭಾರೀ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಹಲವು ಕಡೆಗಳಲ್ಲಿ ಮರಗಳು ಬಿದ್ದು ವಾಹನಗಳು ಜಖಂಗೊಂಡಿರುವ ಆಘಾತಕಾರಿ ಘಟನೆಗಳು ವರದಿಯಾಗಿವೆ. ಆಲಿಕಲ್ಲು ಮಳೆಯ ಆರ್ಭಟ: ನಗರದ ಹೃದಯಭಾಗವಾದ ವಿಧಾನಸೌಧ, ಮೆಜೆಸ್ಟಿಕ್ ಹಾಗೂ ಮಲ್ಲೇಶ್ವರಂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಆಲಿಕಲ್ಲು ಮಳೆಯಾಗಿದೆ. ಇದ್ದಕ್ಕಿದ್ದಂತೆ ಸುರಿದ ಈ ಅನಿರೀಕ್ಷಿತ ಮಳೆಯಿಂದಾಗಿ ನಗರದ ತಾಪಮಾನ ಕುಸಿದಿದೆಯಾದರೂ, ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. … Continue reading BREAKING: ಬೆಂಗಳೂರು ನಗರದಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ಮರಬಿದ್ದು 3 ಕಾರು, 4 ಬೈಕ್ ಜಖಂ