ಬೆಂಗಳೂರು : ಮಾಂಡೌಸ್ ಚಂಡಮಾರುತದ ಪರಿಣಾಮ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದೀಗ ಧಾರಾಕಾರ ಮಳೆಯಾಗುತ್ತಿದೆ.
ನಗರದ ಕೆ ಆರ್ ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ, ಮೈಸೂರು ಬ್ಯಾಂಕ್ ಸರ್ಕಲ್ ಸೇರಿ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಥಂಡಿ ವಾತಾವರಣದ ಜೊತೆಗೆ ಮಳೆ ಕೂಡ ಎಂಟ್ರಿ ಕೊಟ್ಟಿದ್ದು, ವಾಹನ ಸವಾರರು ಪರದಾಡಿದರು.
ಡಿ.16 ವರೆಗೆ ಮಳೆ
ಮ್ಯಾಂಡಸ್ ಚಂಡಮಾರುತದ ಹಿನ್ನೆಲೆ ರಾಜ್ಯದಲ್ಲಿ ಡಿ.16 ರವರೆಗೆ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ( IMD) ಮುನ್ಸೂಚನೆ ನೀಡಿದೆ. ಡಿ.16 ರವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದ್ದು, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇನ್ನೂ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಗದಗ ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.ಇನ್ನೂ, ಮಾಂಡೋಸ್ ಮುನ್ನೆಚ್ಚರಿಕೆ ಹಿನ್ನೆಲೆ ಇಂದು ಸೋಮವಾರ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
‘ಸಾಂಗ್ಲಿಯಾನ ಸಿನಿಮಾ ಸೈಲ್’ನಲ್ಲಿ ಮಾರುವೇಶದಲ್ಲಿ ಫೀಲ್ಡಿಗೆ ಇಳಿದ ತಹಶೀಲ್ದಾರ್: ಆಂಬುಲೆನ್ಸ್ ಕೃತಕ ಸಮಸ್ಯೆ ಬಯಲಿಗೆ
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಗಮನಿಸಿ : ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನಾಂಕ |Scholarship