ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಇಂದು ಸಂಜೆ ( Oct 16) ಧಾರಾಕಾರ ಮಳೆಯಾಗಿದ್ದು, ಗುಡುಗು-ಸಿಡಿಲಿನ ಅಬ್ಬರಕ್ಕೆ ಸಿಲಿಕಾನ್ ಸಿಟಿ ಮಂದಿ ಬೆಚ್ಚಿ ಬಿದ್ದಿದ್ದಾರೆ.
ನಗರದ ಶಾಂತಿನಗರ, , ಮೈಸೂರ್ ಬ್ಯಾಂಕ್ ಸರ್ಕಲ್, ಕೆಆರ್ ಮಾರ್ಕೆಟ್, ಡಬಲ್ ರೋಡ್, ಕಾರ್ಪೋರೇಷನ್ ಬಳಿ ಭರ್ಜರಿ ಮಳೆಯಾಗುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರರು ಹರಸಾಹಸ ಪಟ್ಟರು.
ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಸಂಜೆ ವೇಳೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಭಾರೀ ಮಳೆ ಸುರಿಯುತ್ತಿದೆ.
ಇನ್ನೂ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 18ರವರೆಗೆ ಮಳೆಯಾಗಲಿದೆ. ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ದಕ್ಷಿಣ ಒಳನಾಡಿನ ಬಳ್ಳಾರಿ, ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
WATCH VIDEIO: ಕೋವಿಡ್ ಸೋಂಕಿತರಿಗೆ ಚೀನಾದಲ್ಲಿ ಜೈಲಿನಲ್ಲಿ ವಾಸ: ಇಲ್ಲಿದೆ ವೈರಲ್ ವಿಡಿಯೋ
ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಭಾರಿ ಮಳೆ: IMD ಮುನ್ಸೂಚನೆ | RAIN ALEART