ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಎಡೆಬಿಡದೆ ಮಳೆ ಸುರಿದಿದೆ.ಇದರಿಂದಾಗಿ ಹಳ್ಳಿ ದ್ವೀಪದಂತಾಗಿ ನೀರು ಹೋಗಲು ಜಾಗವಿಲ್ಲದ ಕಾರಣ ಸ್ಥಳೀಯರು ರಸ್ತೆಯನ್ನೇ ಅಗೆದು ನೀರನ್ನು ಹೊರಗೆ ಬಿಟ್ಟಿರುವ ಘಟನೆ ಜಿಲ್ಲೆಯ ನಿಡುವಳ್ಳಿ ಗ್ರಾಮದಲ್ಲಿ ನಡೆದಿದೆ.

BIGG NEWS: ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರ ಹೆಚ್ಚಳ ಮಾಡಿದ Indian Bank

 

ಕಡೂರು ತಾಲೂಕಿನಾದ್ಯಂತ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿಡುವಳ್ಳಿ ಗ್ರಾಮದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಇಡೀ ರಾತ್ರಿ ಪರದಾಡುವಂತಾಗಿದೆ. ಮನೆಯವರು ಇಡೀ ರಾತ್ರಿ ನೀರನ್ನು ತೆಗೆದು ಹೊರಹಾಕಿದ್ದಾರೆ. ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದಷ್ಟೇ ಅಲ್ಲದೆ ನೂರಾರು ಎಕರೆ ತೋಟಗಳು ಕೂಡ ಜಲಾವೃತಗೊಂಡಿವೆ.

BIGG NEWS: ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರ ಹೆಚ್ಚಳ ಮಾಡಿದ Indian Bank

ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ನೀರು ಎಲ್ಲೆಂದರಲ್ಲಿ ನುಗ್ಗಿದ ಪರಿಣಾಮ ಹಳ್ಳಿಗರು ಇಡೀ ರಾತ್ರಿ ಪರದಾಡಿದ್ದಾರೆ. ಇಡೀ ಹಳ್ಳಿ ತುಂಬಾ ನೀರು ತುಂಬಿಕೊಂಡು ಮನೆಗಳಿಗೆ ನೀರು ನುಗ್ಗುತ್ತಿದ್ದ ಪರಿಣಾಮ ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದು ರಸ್ತೆಯನ್ನೇ ಅಗೆದು ನೀರನ್ನು ಹೊರಬಿಟ್ಟಿದ್ದಾರೆ.

Share.
Exit mobile version