ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯಲ್ಲಿ ಗುಡುಗು ಸಹಿತ ಬಾರಿ ಮಳೆಯಾಗುತ್ತಿದ್ದು ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರದಲ್ಲಿ ಮರದ ಕೆಳಗಡೆ ನಿಂದಿದ್ದ ಇಬ್ಬರೂ ವ್ಯಕ್ತಿಗಳು ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಏಕನಾಥ ವಾಗಮೋಡೆ (55) ಸತೀಶ ಶೆಳಕೆ (40) ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.ಇಬ್ಬರು ವಾಡಿ ಪಟ್ಟಣದ ರೈಲ್ವೆ ಕಾಲೋನಿಯ ನಿವಾಸಿಗಳು ಎಂದು ಹೇಳಲಾಗುತ್ತಿದೆ.
ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗುವಾಗ ಜೋರಾಗಿ ಮಳೆ ಬಂದಿದೆ ಈ ವೇಳೆ ಮಳೆ ಬಂದ ಹಿನ್ನೆಲೆಯಲ್ಲಿ ಮರದಡಿ ನಿಂತಿದ್ದಾಗ ಸಿಡಿಲು ಬಡದು ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.