ಬೆಂಗಳೂರು : ಇಂದು ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದು ಈ ಹಿನ್ನೆಲೆ ಜನರಿಗೆ ಎಚ್ಚರದಿಂದ ಇರಿ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ರಾಜ್ಯದ 22 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ವಿಜಯನಗರ, ದಾವಣಗೆರೆ, ಬಳ್ಳಾರಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆಯಿದ್ದು ಎಚ್ಚರಿಕೆ ವಹಿಸುವಂತೆ ಜನರಿಗೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಮಳೆಯ ತೀವ್ರತೆ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.








