ಬೆಂಗಳೂರು : ಕಳೆದ ಎರಡು ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗಿ ಕರ್ನಾಟಕ ಮಿನಿ ಕಾಶ್ಮೀರ ಎಂಬಂತೆ ಆಗಿತ್ತು. ಇದೀಗ ಹವಾಮಾನ ಇಲಾಖೆ ಕರ್ನಾಟಕದ ಹಲವೆಡೆ ಮುಂದಿನ 1 ವಾರಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 1 ವಾರಗಳ ಕಾಲ ಭಾರಿ ಮಳೆಯಾಗಲಿದೆ. ಅಲ್ಲದೆ ಈ ಭಾರಿ ವಿಜಯಪುರ, ಧಾರವಾಡ, ಹಾವೇರಿ, ಗದಗ, ಚಿಕ್ಕಮಗಳೂರು, ಮಂಡ್ಯ, ಕೋಲಾರ ಮತ್ತು ಹಾಸನ ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಆಗಲಿದೆ.
ವಿಜಯಪುರ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮತ್ತು ಬಿರುಗಾಳಿಯೊಂದಿಗೆ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮಂಡ್ಯ, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ತುಮಕೂರು, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಮೈಸೂರು ಮತ್ತು ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ








