ಬೆಂಗಳೂರು: ಸದ್ಯ ರಾಜ್ಯದ ಹಲವೆಡೆ ಮಳೆ ಕೊಂಚ ಬಿಡುವು ನೀಡಿದೆ. ಇದರ ನಡುವೆ 7 ಜಿಲ್ಲೆಗಳಲ್ಲಿ ಮತ್ತೆ ಮಳೆ ಮುಂದುವರೆಯಲಿದೆ. ಭಾರೀ ಮಳೆಯಾಗುವ ಕಾರಣ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಜುಲೈ.3ರಿಂದ ಮತ್ತೆ ಮಳೆ ಚುರುಕು ಪಡೆಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.
ಇನ್ನೂ ವಿಜಯಪುರ, ಹಾವೇರಿ, ಗದಗ, ಬೀದರ್, ಧಾರವಾಡ, ರಾಯಚೂರು, ಕಲಬುರ್ಗಿ, ಕೊಪ್ಪಳ, ರಾಮನಗರ, ವಿಜಯನಗರ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಚಿತ್ರದುರ್ಗ, ದಾವಣೆಗೆರೆ, ಬೆಂಗಳೂರು ಗ್ರಾಮಾಂತರ, ನಗರ, ಚಾಮರಾಜನಗರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.
GOOD NEWS: ರಾಜ್ಯಾಧ್ಯಂತ ‘ಸ್ಟೆಮಿ ಯೋಜನೆ’ ವಿಸ್ತರಣೆ: ಇನ್ಮುಂದೆ ತಾಲ್ಲೂಕು ಕೇಂದ್ರಗಳಲ್ಲೇ ಹೃದಯಾಘಾತಕ್ಕೆ ಚಿಕಿತ್ಸೆ
BREAKING: ತೆಲಂಗಾಣ ಕೈಗಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 10 ಮಂದಿ ಸಾವು, ಹಲವರಿಗೆ ಗಾಯ