ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೂರ್ಯನ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮತ್ತೊಂದೆಡೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗ್ತಿದ್ದು, ಇಂದು ಕೂಡ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹೌದು ಕಳೆದೆರಡು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗ್ತಿದೆ.
ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ , ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಚಾಮರಾಜನಗರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ನಾಳೆ ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ. ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಉತ್ತರ ಕನ್ನಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.








